ರಾಹುಲ್‌ ಗಾಂಧಿ ಆರೋಗ್ಯದಲ್ಲಿ ಏರುಪೇರು –  ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಗೈರು

ರಾಹುಲ್‌ ಗಾಂಧಿ ಆರೋಗ್ಯದಲ್ಲಿ ಏರುಪೇರು –  ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಗೈರು

ಲೋಕಸಭೆ ಚುನಾವಣೆಯ ಕಾವು ಜೋರಾಗಿದೆ. ದೇಶದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ಮುಗಿದಿದ್ದು, ಇದೀಗ ಉಳಿದ ಹಂತದ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ – ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

ರಾಹುಲ್‌ ಗಾಂಧಿ ಅವರು ಕೇರಳ, ಸತ್ನಾ ಮತ್ತು ರಾಂಚಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಬೇಕಿತ್ತು. ಆದರೆ  ರಾಹುಲ್‌ ಗಾಂಧಿ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದೆ. ಸದ್ಯಕ್ಕೆ ದೆಹಲಿಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಗಾ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಸೋಮವಾರ ನಡೆಯಬೇಕಿದ್ದ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ.

ಸತ್ನಾ ಮತ್ತು ರಾಂಚಿಯಲ್ಲಿ ರಾಹುಲ್ ಗಾಂಧಿ ಪ್ರಚಾರಕ್ಕೆ ಸಿದ್ಧರಾಗಿದ್ದರು. ಆದರೆ ಏಕಾಏಕಿ ಅವರ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಅವರು ಭಾಗವಹಿಸಲಿಲ್ಲ. ಪ್ರಸ್ತುತ ನವದೆಹಲಿಯಲ್ಲಿ ಇದ್ದು, ಬರಲು ಸಾಧ್ಯವಾಗುತ್ತಿಲ್ಲ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದರು. ಸದ್ಯಕ್ಕೆ ದೆಹಲಿಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ.

Shwetha M

Leave a Reply

Your email address will not be published. Required fields are marked *