ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡಿದ ರಾಹುಲ್, ಗುಟ್ಟಾಗಿ ಲಸಿಕೆ ಹಾಕಿಸಿಕೊಂಡಿದ್ರು – ಅಮಿತ್ ಶಾ

ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡಿದ ರಾಹುಲ್, ಗುಟ್ಟಾಗಿ ಲಸಿಕೆ ಹಾಕಿಸಿಕೊಂಡಿದ್ರು – ಅಮಿತ್ ಶಾ

ಅಹಮದಾಬಾದ್: ಗುಜರಾತ್ ವಿಧಾನಸಭೆ  ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡೆಯಲಿದೆ. ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಎಲ್ಲಾ ಪ್ರಯತ್ನ ಮಾಡಿವೆ. ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ಅಟ್ಟಹಾಸದ ಸಂದರ್ಭದಲ್ಲಿ ಕೋವಿಡ್ ಲಸಿಕೆಯನ್ನು ಮೋದಿ ಲಸಿಕೆ ಎಂದು ಕಾಂಗ್ರೆಸ್ ಟೀಕಿಸಿತ್ತು. ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಡಿ ಎಂದು ಜನರಿಗೆ ಎಚ್ಚರಿಕೆ ನೀಡಿದ್ದ ರಾಹುಲ್ ಗಾಂಧಿ ಬಳಿಕ  ಗುಟ್ಟಾಗಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದರು ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್ : ಆಪ್ ಸಿಎಂ ಅಭ್ಯರ್ಥಿ ರೋಡ್ ಶೋ ವೇಳೆ ಖಾಲಿ ರಸ್ತೆ – ವೈರಲ್ ಆದ ವಿಡಿಯೋ 6 ತಿಂಗಳು ಹಳೆಯದ್ದು!

ಕೊರೊನಾ ಸಮಯದಲ್ಲಿ ರಾಹುಲ್ ಗಾಂಧಿ, ಟ್ವೀಟ್ ಮೂಲಕ ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳಬೇಡಿ. ಏಕೆಂದರೆ ಅದು ಮೋದಿ ಲಸಿಕೆ ಮತ್ತು ಅದರಿಂದ ನಿಮಗೆ ಹಾನಿಯಾಗುತ್ತದೆ ಎಂದು ಹೇಳುವ ಮೂಲಕ ಜನರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಅದೃಷ್ಟವಶಾತ್, ಯಾರೂ ರಾಹುಲ್ ಗಾಂಧಿಯ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯದಲ್ಲಿ ನಿರತರಾಗಿದ್ದಾಗ ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಜನರನ್ನು ಸುರಕ್ಷಿತವಾಗಿಡಲು ಶ್ರಮಿಸಿದರು ಎಂದು ಅಮಿತ್ ಶಾ ಹೇಳಿದ್ದಾರೆ.

ಗುಜರಾತ್​ನಲ್ಲಿ ಕಾಂಗ್ರೆಸ್ ನಾಯಕರು ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಹೊಡೆದಾಡಿಕೊಳ್ಳುವಂತೆ ಮಾಡುವುದನ್ನು ಬಿಟ್ಟರೆ ಬೇರೇನೂ ಮಾಡಲಿಲ್ಲ. ಬಿಜೆಪಿ ಸರ್ಕಾರವು ಗುಜರಾತ್‌ನಲ್ಲಿ ಗಲಭೆಗಳನ್ನು ನಿರ್ಮೂಲನೆ ಮಾಡಿತು. ಗಲಭೆಗಳು ಹಿಂದೂಗಳಿಗೆ ಅಥವಾ ಮುಸ್ಲಿಮರಿಗೆ ಪ್ರಯೋಜನವಾಗುವುದಿಲ್ಲ. ಹಿಂಸಾಚಾರ ಅಭಿವೃದ್ಧಿಗೆ ಅಡ್ಡಿಪಡಿಸುತ್ತದೆ. ಗುಜರಾತ್​ನಲ್ಲಿ ಬಿಜೆಪಿ ಶಾಂತಿಯನ್ನು ಸ್ಥಾಪಿಸಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.

ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಮಸೂದೆಯನ್ನು ಸಂಸತ್​ನಲ್ಲಿ ಮಂಡಿಸಿದಾಗ ವಿರೋಧ ಪಕ್ಷದ ನಾಯಕರು ಕಾಗೆಗಳಂತೆ ಕೂಗಿದರು ಎಂದು ಟೀಕಿಸಿದರು.

suddiyaana