ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು – ಟ್ವಿಟರ್ ಬಯೋ ಬದಲಿಸಿದ ರಾಗಾ!
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಕಲಾಪದಲ್ಲಿ ಭಾಗಿಯಾಗಿದ್ದಾರೆ. ಈ ಬೆನ್ನಲ್ಲೇ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿದ್ದಾರೆ.
ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ರದ್ದುಪಡಿಸಿದ ಬೆನ್ನಲೇ ತಮ್ಮ ಟ್ವಿಟರ್ ಬಯೋವನ್ನು ಬದಲಿಸಿದ್ದಾರೆ. ಮಾರ್ಚ್‌ನಲ್ಲಿ ಲೋಕಸಭೆಯಿಂದ ಅನರ್ಹಗೊಂಡ ನಂತರ, ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಬಯೋವನ್ನು ‘Dis’Qualified MP’ ಎಂದು ಹಾಕಿಕೊಂಡಿದ್ದರು. ಇದೀಗ, ಹಿಂದಿನ ಬಯೋವನ್ನು ‘Member of Parliament’ ಎಂದು ಬದಲಾಯಿಸಿದ್ದಾರೆ.
ಇದನ್ನೂ ಓದಿ: ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್ – ಕಲಾಪದಲ್ಲಿ ಭಾಗಿಯಾಗಲಿದ್ದಾರೆ ರಾಹುಲ್ ಗಾಂಧಿ
ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ಮರುದಿನವೇ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸೂರತ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.
ಸುಪ್ರೀಂ ತೀರ್ಪಿನ ನಂತರ ಲೋಕಸಭೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿಯವರ ಸದಸ್ಯತ್ವದ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ. ಸದ್ಯ ರಾಹುಲ್ ಗಾಂಧಿಯವರ ಟ್ವಿಟರ್ ಬಯೋದಲ್ಲಿ ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು ಸಂಸತ್ ಸದಸ್ಯ’ ಎಂದಿದೆ.
Congress leader Rahul Gandhi updates his Twitter account bio from ‘Dis’Qualified MP’ to ‘Member of Parliament’ after Lok Sabha Secretariat restored his membership today.
Supreme Court on Friday (August 4) stayed his conviction in the ‘Modi’ surname remark case. pic.twitter.com/ehQjMywEms
— ANI (@ANI) August 7, 2023