ನಾಳೆಯಿಂದ ರಾಹುಲ್​ ಗಾಂಧಿ 2 ದಿನ ರಾಜ್ಯ ಪ್ರವಾಸ – ಅನರ್ಹತೆ ಬಗ್ಗೆ ಕೋಲಾರದಲ್ಲೇ  ಉತ್ತರ ಕೊಡ್ತಾರಾ ರಾಗಾ?

ನಾಳೆಯಿಂದ ರಾಹುಲ್​ ಗಾಂಧಿ 2 ದಿನ ರಾಜ್ಯ ಪ್ರವಾಸ – ಅನರ್ಹತೆ ಬಗ್ಗೆ ಕೋಲಾರದಲ್ಲೇ  ಉತ್ತರ ಕೊಡ್ತಾರಾ ರಾಗಾ?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ನಾಳೆಯಿಂದ (ಏ. 16) ರಿಂದ 2 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಬೆಳಗ್ಗೆ 9.30ಕ್ಕೆ ದೆಹಲಿ ಏರ್​​ಪೋರ್ಟ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 12.25ಕ್ಕೆ ಕೋಲಾರಕ್ಕೆ ಆಗಮಿಸಿ, ಜಿಲ್ಲೆಯ ಹೊರವಲಯದ ಟಮಕ ಬಳಿ ನಡೆಯುವ ಜೈ ಭಾರತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: JDS 2 ನೇ ಪಟ್ಟಿ ಬಿಡುಗಡೆ – ಭವಾನಿ ವಿರುದ್ಧ ಹಠಸಾಧಿಸಿದ ಕುಮಾರಸ್ವಾಮಿ!

ಸಮಾವೇಶದ ಬಳಿಕ ಮಧ್ಯಾಹ್ನ 2.40ಕ್ಕೆ ಕೋಲಾರದಿಂದ ಬೆಂಗಳೂರಿಗೆ ಹೊರಡಲಿದ್ದಾರೆ. ಸಂಜೆ 5 ಗಂಟೆವರೆಗೆ ಶಾಂಗ್ರಿಲಾ ಹೋಟೆಲ್​ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 5.30ಕ್ಕೆ ಜೆ.ಪಿ.ನಗರದಲ್ಲಿನ ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರ ಜತೆ ಸಂವಾದ ನಡೆಸಲಿದ್ದಾರೆ. ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ಏ.17ರಂದು ರಾಹುಲ್ ಗಾಂಧಿ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಭಾಲ್ಕಿ, ಹುಮನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ರಾಹುಲ್ ಗಾಂಧಿಯವರು ಕೋಲಾರದಲ್ಲಿ ಜೈ ಭಾರತ್ ಸಮಾವೇಶದಲ್ಲಿ ಭಾಗವಹಿಸುವ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಕೋಲಾರಕ್ಕೆ ಭೇಟಿ ನೀಡಿ, ವೇದಿಕೆ ಸೇರಿದಂತೆ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ. ಕೋಲಾರ ಹೊರವಲಯದ ಟಮಕ ಬಳಿ ಬೃಹತ್ ವೇದಿಕೆ ಹಾಕಲಾಗಿದ್ದು, ಸುಮಾರು ಒಂದುವರೆ ಲಕ್ಷ ಜನ ಸೇರುವ ನಿರೀಕ್ಷೆದೆ.

2019ರ ಲೋಕಸಭಾ ಚುನಾವಣೆ ವೇಳೆ ಮೋದಿ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅನರ್ಹಗೊಂಡಿದ್ದರು. ಇದಕ್ಕೆ ಕೋಲಾರದಿಂದಲೇ ಪ್ರತ್ಯುತ್ತರ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕೋಲಾರದಿಂದಲೇ ಪ್ರಚಾರ ಆರಂಭಿಸಿ, ಅನರ್ಹಗೊಳಿಸಿದ್ದನ್ನೇ ಪ್ರಚಾರದ ಪ್ರಭಲ‌ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಮತ್ತು ಬಿಜೆಪಿ ಸರ್ಕಾರಕ್ಕೆ ಉತ್ತರ ನೀಡಲು ಸಿದ್ದವಾಗಿದೆ.

ಎರಡು ಬಾರಿ ದಿನಾಂಕ ಬದಲು

ಈ ಮೊದಲು ಏಪ್ರಿಲ್ 5 ರಂದು ಕೋಲಾರದಲ್ಲಿ ಸಮಾವೇಶ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕರು ದಿನಾಂಕ ನಿಗದಿ ಮಾಡಿದ್ದರು. ಬಳಿಕ ಏಪ್ರಿಲ್ 10 ಕ್ಕೆ ಸಮಾವೇಶ ಮುಂದೂಡಿದ್ದರು. ಇದೀಗ ಎರಡು ಬಾರಿ ದಿನಾಂಕ ಬದಲಿಸುವ ಮೂಲಕ ಕಾಂಗ್ರೆಸ್ ನಾಯಕರು ಏಪ್ರಿಲ್ 16 ರಂದು ಸಮಾವೇಶ ನಡೆಸಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.

 

suddiyaana