ರಾಯ್ ಬರೇಲಿಯಿಂದ ರಾಹುಲ್ ಸ್ಪರ್ಧೆ – ಅಮೇಥಿ ಕ್ಷೇತ್ರ ಯಾರ ಪಾಲಾಯ್ತು?

ರಾಯ್ ಬರೇಲಿಯಿಂದ ರಾಹುಲ್ ಸ್ಪರ್ಧೆ – ಅಮೇಥಿ ಕ್ಷೇತ್ರ ಯಾರ ಪಾಲಾಯ್ತು?

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಉತ್ತರ ಪ್ರದೇಶದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡದೇ ಪೆಂಡಿಂಗ್‌ ಇಟ್ಟುಕೊಂಡಿತ್ತು. ಇದು ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಎರಡು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಇದನ್ನೂ ಓದಿ: ಪ್ರಜ್ವಲ್​ಗೆ ಎದುರಾಯ್ತು ಮತ್ತೊಂದು ಸಂಕಷ್ಟ – ದಾಖಲಾಯ್ತು ಅತ್ಯಾಚಾರ ಪ್ರಕರಣ

ರಾಯ್ ​ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿದ್ದರೆ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾಗೆ ಟಿಕೆಟ್ ನೀಡಿದೆ. ಕೊನೆಗೂ ಅಮೇಥಿ ಲೋಕ ಸಭೆ ಕ್ಷೇತ್ರವನ್ನು ಗಾಂಧಿ ಕುಟುಂಬ ಬೇರೆಯವರಿಗೆ ಬಿಟ್ಟುಕೊಟ್ಟಿದೆ. ಈ ಬಾರಿಯೂ ಸ್ಪರ್ಧೆ ಮಾಡಿ ನೋಡೊಣ ಅಂತಾ ಸ್ಮೃತಿ ಇರಾನಿ ಚಾಲೇಂಜ್ ಹಾಕಿದ್ದರು. ಮಾತ್ರವಲ್ಲ ಅವರು ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧೆಗೆ ನಿಂತಿರೋದಕ್ಕೆ ರಾಹುಲ್‌ಗಾಂಧಿ ಪಲಾಯನ ಮಾಡಿದ್ದಾರೆ ಎಂದು ಸ್ಮೃತಿ ಇರಾನಿ ಆರೋಪ ಮಾಡಿದ್ದರು.

ಇತ್ತ ರಾಯ್​ ಬರೇಲಿಯಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡ್ತಾರೆ ಎಂಬ ಸುದ್ದಿ ಇತ್ತು. ಪಟ್ಟಿ ಪ್ರಕಟ ಬೆನ್ನಲ್ಲೇ ಚುನಾವಣಾ ಕಣದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ದೂರ ಇರೋದು ಸ್ಪಷ್ಟವಾಗಿದೆ. ಇನ್ನು ರಾಹುಲ್ ಗಾಂಧಿ, ಈ ಬಾರಿಯೂ ಎರಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ವಯನಾಡು ಲೋಕಸಭೆ ಕ್ಷೇತ್ರಕ್ಕೆ ಈಗಾಗಲೇ ಚುನಾವಣೆ ನಡೆದಿದೆ. ರಾಯ್ ಬರೇಲಿಯಲ್ಲಿ ಮೇ 20 ರಂದು ಮತದಾನ ನಡೆಯಲಿದೆ.

Shwetha M