ಭಾರತ್‌ ಜೋಡೋ ಯಾತ್ರೆ ಬಳಿಕ ರಾಹುಲ್‌ ಗಾಂಧಿಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ

ಭಾರತ್‌ ಜೋಡೋ ಯಾತ್ರೆ ಬಳಿಕ ರಾಹುಲ್‌ ಗಾಂಧಿಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೋ ಯಾತ್ರೆ ಬಳಿ ಮೊಣಕಾಲು ನೋವಿನ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ರಾಹುಲ್‌ ಗಾಂಧಿ ಕೇರಳದಲ್ಲಿ ಮೊಣಕಾಲು ಸಂಬಂಧಿತ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ  ಪಡೆಯುತ್ತಿದ್ದು, ಭಾನುವಾರ ಅವರು ಡಿಸ್ಚಾರ್ಜ್ ಆಗುವ ನಿರೀಕ್ಷೆಗಳಿವೆ ಎಂದು ಮೂಲಗಳು ಹೇಳಿವೆ.

ಕಳೆದ ವರ್ಷ ಸೆಪ್ಟೆಂಬರ್‌ನಿಂದ ಈ ವರ್ಷದ ಜನವರಿಯವರೆಗೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ಹೆಸರಿನಲ್ಲಿ ಪಾದಯಾತ್ರೆ ನಡೆಸಿದ್ದರು. ಕನ್ಯಾಕುಮಾರಿಯಿಂದ ಆರಂಭಗೊಂಡಿದ್ದ 146 ದಿನಗಳ ಪಾದಯಾತ್ರೆ ಕಾಶ್ಮೀರದ ಶ್ರೀನಗರದಲ್ಲಿ ಕೊನೆಯಾಗಿತ್ತು. ಈ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ನಿರಂತರವಾಗಿ ನಡೆದಿದ್ದರು. ಯಾತ್ರೆ ಬಳಿಕ ರಾಹುಲ್‌ ಗಾಂಧಿಗೆ ಮೊಣಕಾಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ರಾಹುಲ್ ಗಾಂಧಿ ಜೊತೆಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ ರವಿಗೆ ಕೊಕ್ – ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಗಾಂಧಿ ಮಂಗಳವಾರ ಕೇರಳಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿಯೇ ಮೊಣಕಾಲು ಸಂಬಂಧಿತ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯಲು ಆರಂಭಿಸಿದ್ದಾರೆ. ಆಸ್ಪತ್ರೆಯಲ್ಲಿದ್ದಾಗ ಅವರು ಮಲಯಾಳಂನ ಪ್ರಸಿದ್ಧ ಬರಹಗಾರ-ನಿರ್ದೇಶಕ ಎಂಟಿ ವಾಸುದೇವನ್ ನಾಯರ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಅವರಿಗೆ ಪೆನ್ನನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆಸ್ಪತ್ರೆಯಲ್ಲಿದ್ದಾಗ ಪಿಎಸ್‌ವಿ ನಾಟ್ಯ ಸಂಘವು ಪ್ರದರ್ಶಿಸಿದ ‘ದಕ್ಷಯಜ್ಞ’ ಕಥೆಯನ್ನು ಆಧರಿಸಿದ ಕಥಕ್ಕಳಿ ಪ್ರದರ್ಶನ ವೀಕ್ಷಿಸಿದರು.

suddiyaana