ಮಾರ್ಚ್ 20ರಂದು ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ – ‘ಯುವ ಕ್ರಾಂತಿ’ ರ್ಯಾಲಿಗೆ ರಣಕಹಳೆ..!
2023ನೇ ವರ್ಷ ಶುರುವಾಗಿದ್ದೇ ಆಗಿದ್ದು. ದೆಹಲಿ ನಾಯಕರೆಲ್ಲಾ ಕರ್ನಾಟಕಕ್ಕೆ ಬ್ಯಾಕ್ ಟು ಬ್ಯಾಕ್ ವಿಸಿಟ್ ಕೊಡ್ತಿದ್ದಾರೆ. ತಮ್ಮ ಪಕ್ಷವನ್ನೇ ಅಧಿಕಾರಕ್ಕೆ ತರಲು ನಾನಾ ಕಸರತ್ತು ಮಾಡ್ತಿದ್ದಾರೆ. ಅದರಲ್ಲೂ ಪ್ರಧಾನಿ ಮೋದಿ ಜನವರಿಯಿಂದ ಸಾಲು ಸಾಲು ಭೇಟಿ ನೀಡುತ್ತಿದ್ದಾರೆ. ಇದೀಗ ಭಾರತ್ ಜೋಡೋ ಯಾತ್ರೆ ವೇಳೆ ರಾಜ್ಯದಲ್ಲಿ ಹೆಜ್ಜೆ ಹಾಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ (ಮಾರ್ಚ್ 20)ದಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ : ಕೋಲಾರ ರಣಕಣದಿಂದ ಹಿಂದೆ ಸರಿದ ಸಿದ್ದರಾಮಯ್ಯ – ಕಾರಣಗಳೇನು.. ಯಾವ ಕ್ಷೇತ್ರದಿಂದ ಸ್ಪರ್ಧೆ..?
ಭಾರತ್ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಯುವ ಕ್ರಾಂತಿ ರ್ಯಾಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆಯಲ್ಲಿ 1924ರ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಹೀಗಾಗಿ, ಇದೇ ಸ್ಥಳದಿಂದ ‘ಯುವ ಕ್ರಾಂತಿ’ ಱಲಿ ಆರಂಭಿಸಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಚ್ 20ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವುದರಿಂದ ಕಾರ್ಯಕ್ರಮ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈಗಾಗಲೇ ಸಭೆ ನಡೆಸಿದ್ದಾರೆ. ಸಮಾವೇಶದ ವೇದಿಕೆ ನಿರ್ಮಾಣ ಸೇರಿದಂತೆ ಇತರ ಕಾರ್ಯಗಳನ್ನು ವೀಕ್ಷಣೆ ಮಾಡಿದ್ದಾರೆ.