ಅಮೆರಿಕದಲ್ಲಿ ರಾಹುಲ್ ಗಾಂಧಿ ಟ್ರಕ್ ಪ್ರಯಾಣ – ಭಾರತೀಯ ಟ್ರಕ್ ಡ್ರೈವರ್ ಸಮಸ್ಯೆ ಆಲಿಸಿದ ರಾಗಾ

ವಾಷಿಂಗ್ಟನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರಳ ಸಜ್ಜನಿಕೆಯ ವ್ಯಕ್ತಿ. ಆಗಾಗ ಸಾರ್ವಜನಿಕ ಪ್ರದೇಶಗಳಲ್ಲಿ ಜನಸಾಮಾನ್ಯರಂತೆ ಕಾಣಿಸಿಕೊಳ್ಳುತ್ತಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಟ್ರಕ್ ನಲ್ಲಿ ಪ್ರಯಾಣಿಸುವ ಮೂಲಕ ಗಮನಸೆಳೆದಿದ್ದಾರೆ. ಈ ಬಾರಿ ಅವರು ಅಮೆರಿಕದಲ್ಲಿ ಟ್ರಕ್ ಪ್ರಯಾಣ ಮಾಡಿದ್ದಾರೆ. ಅಮೆರಿಕದಲ್ಲಿರುವ ಭಾರತೀಯ ಟ್ರಕ್ ಡ್ರೈವರ್‌ಗಳ ದೈನಂದಿನ ಜೀವನದ ಕುರಿತು ಚಾಲಕನೊಂದಿಗೆ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳ ಜೊತೆಗಿನ ಸಚಿವರ ಸಭೆಯಲ್ಲಿ ಸುರ್ಜೇವಾಲ ಭಾಗಿ – ‘ಕೈ’ ವಿರುದ್ಧ ಬಿಜೆಪಿ, ಜೆಡಿಎಸ್ ವಾಗ್ಬಾಣ!
ರಾಹುಲ್ ಗಾಂಧಿ ಅವರು ಅಮೆರಿಕ ಪ್ರವಾಸದ ವೇಳೆ ವಾಷಿಂಗ್ಟನ್ ಹಾಗೂ ನ್ಯೂಯಾಕ್ ನಡುವೆ 190 ಕಿ.ಮೀ ದೂರ ಟ್ರಕ್‌ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಭಾರತ ಮೂಲದ ಟ್ರಕ್ ಚಾಲಕ ತಲ್ಜಿಂದರ್ ಸಿಂಗ್ ಜೊತೆ ಮಾತುಕತೆ ನಡೆಸಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಬಳಿಕ ಅಮೆರಿಕ ಟ್ರಕ್ ಚಾಲಕರು ಎದುರಿಸುತ್ತಿರುವ ಸವಾಲುಗಳು, ಅಮೆರಿಕ ಹಾಗೂ ಭಾರತದಲ್ಲಿ ಟ್ರಕ್ ಉದ್ಯಮದ ಬಗ್ಗೆ ಚರ್ಚೆ ನಡೆಸಿದ್ದಾರೆ. ಟ್ರಕ್ ಪ್ರಯಾಣದ ವೇಳೆ ರಾಹುಲ್ ಗಾಂಧಿ ಪಂಜಾಬಿನ ಸಿಧು ಮೂಸೇವಾಲಾ ಅವರ ಹಾಡನ್ನು ಆಲಿಸಿ ಕೊನೆಗೆ ಹೋಟೆಲಿನಲ್ಲಿ ಆಹಾರ ತಿಂದು ಪ್ರಯಾಣ ಮುಗಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ರಾಹುಲ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಮಹಿಳೆಯರೊಂದಿಗೆ ಸಂವಾದ ನಡೆಸಿದ್ದರು. ಬಳಿಕ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದರು. ನಂತರ ಬೆಂಗಳೂರಿನಲ್ಲಿ ಬಾಡಿಗೆ ಟ್ಯಾಕ್ಸಿ ಚಾಲಕರು ಮತ್ತು ಆಹಾರ ವಿತರಣೆ ಮಾಡುವ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿದ್ದರು. ಕಳೆದ ತಿಂಗಳು ದೆಹಲಿ ಹಾಗೂ ಚಂಡೀಗಢ ಮಧ್ಯದಲ್ಲೂ ಟ್ರಕ್ ಮೂಲಕ ಸಂಚರಿಸಿದ್ದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಾವು ಇತ್ತೀಚೆಗೆ ಟ್ರಕ್‌ನಲ್ಲಿ ದಿಲ್ಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆ ಹಾಗೂ ಯೂಟ್ಯೂಬ್‌ನಲ್ಲಿ ಶೇರ್ ಮಾಡಿದ್ದರು.
“कितना कमा लेते हो?”
“कुछ गाने बजा लें? सिद्धू मूसेवाला के?”
“हम ट्रक वालों के कारण ही मैन्युफैक्चरर्स का काम चलता है।”
अमेरिका में एक भारतीय ड्राइवर के साथ ट्रक यात्रा, उनके अनुभव और कहानियां!
पूरा वीडियो यूट्यूब पर:https://t.co/AxWYEHoka7 pic.twitter.com/KQ8OJq8Vrg
— Rahul Gandhi (@RahulGandhi) June 13, 2023