ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಬೆಂಬಲ ಕೊಟ್ಟ ವಿರೋಧ ಪಕ್ಷ
ಸಂಸತ್ ಅಧಿವೇಶನ ಕರೆಯುವಂತೆ ರಾಹುಲ್ ಗಾಂಧಿ ಒತ್ತಾಯ

‘ಆಪರೇಷನ್ ಸಿಂಧೂರ್’ ಕುರಿತ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸಿವೆ. ಉತ್ತಮ ಸಂದೇಶ ನೀಡಲು ಸಂಸತ್ ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಒತ್ತಾಯಿಸಿದರು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸದಿರುವುದು ತೀವ್ರ ನಿರಾಶೆ ಮೂಡಿಸಿದೆ ಎಂದರು.
“ಪ್ರಧಾನಿ ಭಾಗವಹಿಸಿ ಭಯೋತ್ಪಾದನೆ ವಿರುದ್ಧದ ಕ್ರಮದ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡುತ್ತಾರೆ ಎಂದು ನಾವು ಬಯಸಿದ್ದೆವು. ಆದರೆ ಅವರು ಬರಲಿಲ್ಲ. ಕಳೆದ ಬಾರಿ ನಡೆದ ಸರ್ವಪಕ್ಷ ಸಭೆಗೂ ಪ್ರಧಾನಿ ಹಾಜರಾಗಿರಲಿಲ್ಲ” ಎಂದು ಖರ್ಗೆ ಹೇಳಿದರು.
‘ಆಪರೇಷನ್ ಸಿಂಧೂರ್’ ಕುರಿತ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸಿವೆ. ಉತ್ತಮ ಸಂದೇಶ ನೀಡಲು ಸಂಸತ್ ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಒತ್ತಾಯಿಸಿದರು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.