ರಾಜ್ಕೋಟ್ನಲ್ಲಿ ಕನ್ನಡಿಗ ರಾಹುಲ್ ದರ್ಬಾರ್! – ನ್ಯೂಜಿಲೆಂಡ್ಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅಮೋಘ ಶತಕ ಬಾರಿಸಿ ಭಾರತ ತಂಡಕ್ಕೆ ಆಸರೆಯಾಗಿದ್ದಾರೆ.
ಇದನ್ನೂ ಓದಿ: ತಿರುಪತಿ ಆಯ್ತು.. ಈಗ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್! – ತನಿಖೆಗೆ ಆದೇಶಿಸಿದ ಕೇರಳ ಹೈಕೋರ್ಟ್!
ರಾಜ್ಕೋಟ್ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ದುಕೊಂಡಿತ್ತು. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಕ್ಕೆ ಪ್ರಮುಖ ಆಟಗಾರರ ವಿಕೆಟ್ ಪತನ ಆಘಾತವನ್ನುಂಟು ಮಾಡಿತ್ತು. ರೋಹಿತ್ ಶರ್ಮಾ 24 ರನ್ಗೆ ವಿಕೆಟ್ ಒಪ್ಪಿಸಿದ್ರೆ, ಶುಭ್ಮನ್ ಗಿಲ್ 56 ರನ್ ಬಾರಿಸಿ ಪೆವಿಲಿಯನ್ ಸೇರಿದ್ರು. ಇನ್ನು ವಿರಾಟ್ ಕೊಹ್ಲಿಯೂ ಇಂದಿನ ಮ್ಯಾಚ್ನಲ್ಲಿ ಫ್ಯಾನ್ಸ್ಗೆ ನಿರಾಸೆ ಮೂಡಿಸಿದ್ದಾರೆ. ಕಿಂಗ್ ಕೊಹ್ಲಿ ಕೇವಲ 23 ರನ್ ಬಾರಿಸಿ ಔಟ್ ಆದ್ರು. ಆದ್ರೆ ಈ ಪಂದ್ಯದಲ್ಲಿ ತಂಡದ ಪರ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ರಾಹುಲ್, ತಂಡವನ್ನು ಸಂಕಷ್ಟದಿಂದ ಪಾರು ಮಾಡಿದಲ್ಲದೆ, ತಮ್ಮ ಏಕದಿನ ವೃತ್ತಿಜೀವನದ 8ನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಕೊನೆಯವರೆಗೂ ಅಜೇಯರಾಗಿ ಉಳಿದ ರಾಹುಲ್ ತಂಡವನ್ನು 284 ರನ್ಗಳಿಗೆ ಕೊಂಡೊಯ್ದಿದ್ದು ಮಾತ್ರವಲ್ಲದೆ ತಾವು ಕೂಡ 92 ಎಸೆತಗಳಲ್ಲಿ ಅಜೇಯ 112 ರನ್ ಬಾರಿಸಿದ್ದಾರೆ. ಇನ್ನು ಭರ್ಜರಿ ಶತಕ ಬಾರಿಸಿದ ಕನ್ನಡಿಗ ಮೈದಾನದಲ್ಲಿ ಸಂಭ್ರಮಿಸಿದ್ದಾರೆ. ಬ್ಯಾಟ್ ಮೇಲೆ ಎತ್ತಿ ಬಾಯಲ್ಲಿ ಸಂಭ್ರಮಿಸಿದ್ದಲ್ಲದೇ, ಹೆಲ್ಮೆಟ್ಗೆ ಮುತ್ತಿಟ್ಟಿದ್ದಾರೆ.
ನ್ಯೂಜಿಲೆಂಡ್ ಪರ ಸಂಘಟಿತ ಬೌಲಿಂಗ್ ದಾಳಿ ಪ್ರದರ್ಶನ ಕಂಡುಬಂದಿತ್ತು. ವೇಗಿ ಕ್ರಿಶ್ಚಿಯನ್ ಕ್ಲಾರ್ಕೆ ಪ್ರಮುಖ ಮೂರು ವಿಕೆಟ್ ಕಬಳಿಸುವ ಮೂಲಕ ಕಿವೀಸ್ ಪಡೆಯ ಬೌಲಿಂಗ್ ವಿಭಾಗಕ್ಕೆ ಬಲ ತುಂಬಿದರು. ಕೈಲ್ ಜೇಮಿಸನ್, ಜಕಾರಿ ಫೋಕ್ಸ್, ಜೇಡನ್ ಲಿನಾಕ್ಸ್ ಮತ್ತು ಮೈಕೆಲ್ ಬ್ರೇಸ್ವೆಲ್ ತಲಾ ಒಂದು ವಿಕೆಟ್ ಪಡೆದರು.

ನೋಡಿರಿ

