ಬಿಸಿಲಿನಿಂದ ಕಂಗೆಟ್ಟಿದ್ದ ಜನರನ್ನ ತಣಿಸಲಿದ್ದಾನೆ ವರುಣ – ಇಂದು & ನಾಳೆ ಎಲ್ಲೆಲ್ಲಿ ಮಳೆ ಸಾಧ್ಯತೆ..?

ಬಿಸಿಲಿನಿಂದ ಕಂಗೆಟ್ಟಿದ್ದ ಜನರನ್ನ ತಣಿಸಲಿದ್ದಾನೆ ವರುಣ – ಇಂದು & ನಾಳೆ ಎಲ್ಲೆಲ್ಲಿ ಮಳೆ ಸಾಧ್ಯತೆ..?

ಮನೆ ಒಳಗಿದ್ರೂ ಧಗೆ. ಹೊರಗೆ ಹೋದ್ರಂತೂ ನೆತ್ತಿ ಸುಡುವ ಬಿಸಿಲು. ಬೇಸಿಗೆ ಬಿಸಿಲಲ್ಲಿ ಬಸವಳಿದಿರೋ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 16, 17ರಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಗಾಗಲೇ ಮಾರ್ಚ್ 15 ರಂದು ರಾಜ್ಯದ ಕೆಲವೆಡೆ ವರುಣ ತಂಪೆರೆದಿದ್ದು ಮುಂದಿನ 48ಗಂಟೆಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇದಲ್ಲದೆ, ಮುಂದಿನ ನಾಲ್ಕು ದಿನಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಮುಂದಿನ ನಾಲ್ಕೈದು ದಿನಗಳಲ್ಲಿ ಬೆಂಗಳೂರಿನ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ? – ಅವಧಿಗೂ ಮುನ್ನ ಮುಂಗಾರು ಮಳೆ

ಮಾರ್ಚ್ 16 ಮತ್ತು ನಾಳೆ ಮಾರ್ಚ್ 17 ರಂದು ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಈಗಾಗಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯ ಹಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ.

ಐಎಂಡಿ ಮುನ್ಸೂಚನೆಯ ಪ್ರಕಾರ, ಉತ್ತರ-ಒಳನಾಡಿನಾದ್ಯಂತ ಗುಡುಗು ಸಹಿತ ಚಂಡಮಾರುತದ ಚಟುವಟಿಕೆಗಳು ಭಾನುವಾರದವರೆಗೆ ಮುಂದುವರಿಯುತ್ತದೆ. ಆದರೆ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಮತ್ತು ದಕ್ಷಿಣ-ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

suddiyaana