ಹಬ್ಬದ ಖುಷಿಗೆ ಬೆಲೆ ಏರಿಕೆ ಶಾಕ್! – ತೊಗರಿ ಬೇಳೆ ಕೆಜಿಗೆ ₹160!

ಸಾಲು ಸಾಲು ಹಬ್ಬಗಳು ಆರಂಭವಾಗಿರುವ ಹೊತ್ತಲ್ಲೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಈಗಾಗಲೇ ಅಕ್ಕಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ, ಇದೀಗ ತೊಗರಿ ಬೇಳೆ ದರ ಏರಿಕೆ ಮತ್ತೊಂದು ಶಾಕ್ ನೀಡಿದೆ. ಎಲ್ ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗಿ ತೊಗರಿ ಇಳುವರಿ ಕುಸಿದಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.
ಕಳೆದ 15 ದಿನಗಳ ಅಂತರದಲ್ಲೇ ತೊಗರಿ ಬೇಳೆ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಪ್ರಸ್ತುತ ಸಾಮಾನ್ಯ ಗುಣಮಟ್ಟದ ತೊಗರಿ ಬೇಳೆ ಬೆಲೆ ಪ್ರತಿ ಕೆಜಿಗೆ ಸುಮಾರು 140 ರೂಪಾಯಿಗೆ ತಲುಪಿದೆ ಎಂದು ವರದಿಯಾಗಿದೆ. ಇನ್ನು ಪ್ರೀಮಿಯಂ ಗುಣಮಟ್ಟದ ತೊಗರಿ ಬೇಳೆ ಬೆಲೆ ಅಕ್ಟೋಬರ್ 1ರಂದು ಕೆಜಿಗೆ 146 ರೂಪಾಯಿ ಇತ್ತು. ಇದೀಗ ಅದು 160 ರೂಪಾಯಿಗೆ ಏರಿಕೆಯಾಗಿದೆ.
ಇದನ್ನೂ ಓದಿ: ಈ ಆಹಾರಗಳನ್ನ ಸೇವಿಸಿದ್ರೆ ಬ್ಯಾಡ್ ಕೊಲೆಸ್ಟ್ರಾಲ್ ಬರಲ್ಲ! – ಮನೆಯಲ್ಲೇ ಟ್ರೈ ಮಾಡಿ ಈ ರೆಸಿಪಿ!
ಇದರ ಜೊತೆಗೆ ಮಾರುಕಟ್ಟೆಯಲ್ಲಿ ತೊಗರಿ ಬೆಲೆಯೂ ಹೆಚ್ಚಾಗಿದೆ. ಕಳೆದ ತಿಂಗಳು ಪ್ರತಿ ಕ್ವಿಂಟಲ್ ತೊಗರಿಗೆ ಕನಿಷ್ಠ 7,100 ರೂಪಾಯಿಯಿಂದ ಗರಿಷ್ಠ 9,500 ರೂಪಾಯಿವರೆಗೆ ಬೆಲೆ ಇತ್ತು. ಅಕ್ಟೋಬರ್ 1ರಂದು ಕನಿಷ್ಠ ಬೆಲೆ 8,500 ರೂಪಾಯಿ ಹಾಗೂ ಗರಿಷ್ಠ ಬೆಲೆ 10 ಸಾವಿರ ರೂಪಾಯಿಗೆ ಏರಿಕೆಯಾಗಿತ್ತು. ಹೀಗೆ ಕೇವಲ 15 ದಿನಗಳಲ್ಲಿ ಪ್ರತಿ ಕ್ವಿಂಟಲ್ಗೆ ಸುಮಾರು 1,500 ರೂಪಾಯಿ ಏರಿಕೆಯಾಗಿದೆ.
ಒಟ್ಟಿನಲ್ಲಿ, ಹಬ್ಬದ ಸಮಯದಲ್ಲಿ ದಿನಸಿ ಸಾಮಗ್ರಿಗಳ ಬೆಲೆ ಏರಿಕೆಯಾಗುತ್ತಿರುವುದು ಮಧ್ಯಮ ವರ್ಗದ ಕುಟುಂಬಗಳ ಬಜೆಟ್ಗೆ ಹೊಡೆತ ನೀಡಿದೆ. ಮುಂದಿನ ದಿನಗಳಲ್ಲಿ ಬೇಳೆಕಾಳುಗಳ ಬೆಲೆ ಇಳಿಕೆಯಾಗುತ್ತದೆಯೇ ಅಥವಾ ಮತ್ತಷ್ಟು ಏರಿಕೆಯಾಗುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

ನೋಡಿರಿ

