ರಾಜ್ಯದ ಹಲವೆಡೆ ಮುಂಜಾನೆಯೇ ಜಿಟಿಜಿಟಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವೆಡೆ ಮುಂಜಾನೆಯೇ ಜಿಟಿಜಿಟಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಹಲವೆಡೆ ಮುಂಜಾನೆಯೇ ಜಿಟಿಜಿಟಿ ಮಳೆ - ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಮುಂಜಾನೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಮೊಟ್ಟೆ ಮೊದಲಾ.. ಕೋಳಿ ಮೊದಲಾ? – ಮಿಲಿಯನ್ ಡಾಲರ್ ಪ್ರಶ್ನೆಗೆ ವಿಜ್ಞಾನಿಗಳಿಂದ ಕೊನೆಗೂ ಉತ್ತರ!

ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮನ್ಸೂಚನೆ ಸಿಕ್ಕಿದ್ದು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚೆನ್ನೈ ಸೇರಿದಂತೆ ತಮಿಳುನಾಡು ಭಾಗದಲ್ಲಿಯೂ ಧಾರಕಾರ ಮಳೆಯಾಗುತ್ತಿದೆ. ಬುಧವಾರ (ನಾಳೆ) ಬೆಳಗ್ಗೆ ವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಅಲ್ಲದೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

suddiyaana