ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ? – ಅವಧಿಗೂ ಮುನ್ನ ಮುಂಗಾರು ಮಳೆ

ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ? – ಅವಧಿಗೂ ಮುನ್ನ ಮುಂಗಾರು ಮಳೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ಹೆಚ್ಚುತ್ತಿರುವ ನಡುವೆಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆ ರಾಜ್ಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಾ.14 ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಸುರಿಯಲಿದ್ದು, ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಬೇಸಿಗೆ ಬಿಸಿಲಲ್ಲಿ ಹೊತ್ತಿ ಉರಿಯುತ್ತಿದೆ ಕಾಡು – ಬೆಂಕಿ ಕೆನ್ನಾಲಗೆಗೆ ಮರಗಳು, ಜೀವಸಂಕುಲ ಭಸ್ಮ..!

ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ

ರಾಜ್ಯದಲ್ಲಿ ಈ ವರ್ಷ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು  ಹೇಳಿದ್ದಾರೆ.

1901ರ ಬಳಿಕ ಕಳೆದ ಫೆಬ್ರವರಿಯಲ್ಲಿ ಹೆಚ್ಚು ಬಿಸಿಲಿನಿಂದ ಕೂಡಿತ್ತು. ಈ ರೀತಿಯ ವಾತಾವರಣದಿಂದ ಮುಂಗಾರು ಪೂರ್ವ ಮಳೆ ಅವಧಿಗೂ ಮುನ್ನವೇ ಬರಲಿದೆ. ಸಾಮಾನ್ಯವಾಗಿ ಮುಂಗಾರು ಪೂರ್ವ ಮಾರುತಗಳು ಮಾರ್ಚ್‌ ಮಧ್ಯದಲ್ಲಿ ಆರಂಭವಾಗುತ್ತದೆ. ಆದರೆ ಈ ವರ್ಷ ಅವಧಿಗೂ ಮುನ್ನವೇ ಮಳೆಯಾಗುವ ಸಾಧ್ಯತೆ ಇದೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವುದು  ಇದಕ್ಕೆ ಮುಖ್ಯ ಕಾರಣ ಎಂದು ಸ್ಕೈಮೆಟ್‌ನ ಹವಾಮಾನ ತಜ್ಞ ಮಹೇಶ್‌ ಮಲಾವತ್‌ ಹೇಳಿದ್ದಾರೆ.

suddiyaana