ಡಿಸೆಂಬರ್ 29ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆ ಸಾಧ್ಯತೆ

ಡಿಸೆಂಬರ್ 29ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆ ಸಾಧ್ಯತೆ

ಕಳೆದ ಒಂದು ವಾರದಲ್ಲಿ ಒಣಹವೆ ಕಂಡು ಬಂದ ಬೆನ್ನಲ್ಲೇ ಈಗ ಮತ್ತೆ ಮಳೆಯಾಗುತ್ತಿದೆ. ಅದರಲ್ಲೂ ಡಿಸೆಂಬರ್ 27 ಮತ್ತು ಡಿಸೆಂಬರ್ 28ರಂದು ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಡಿಸೆಂಬರ್ 29ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:  ಮುಂದಿನ ವರ್ಷ ಜಾಗತಿಕ ಆರ್ಥವ್ಯವಸ್ಥೆ ಭಾರಿ ಪ್ರಮಾಣದಲ್ಲಿ ಕುಸಿಯಲಿದೆಯಾ? – ಆರ್ಥಿಕ ತಜ್ಞರು ನುಡಿದ ಭವಿಷ್ಯವೇನು?

ಬೆಂಗಳೂರಲ್ಲಿ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಭಾನುವಾರ ಸಂಜೆ ವೇಳೆ ಸಾಧಾರಣ ಮಳೆಯಾಗಿದ್ದು, ತಂಪಾದ ವಾತಾವರಣ ಮುಂದುವರೆದಿದೆ. ಯಾವ ಸಮಯದಲ್ಲೂ ಬೇಕಾದರೂ ಮಳೆ ಸುರಿಯಬಹುದು ಅನ್ನೋ ವಾತಾವರಣ ನಿರ್ಮಾಣವಾಗಿದೆ. ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಅದರಲ್ಲೂ ಡಿಸೆಂಬರ್ 27 ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕ ಮಾತ್ರವಲ್ಲದೆ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಶೀತ ಅಲೆಯ ಪರಿಸ್ಥಿತಿಗಳು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

suddiyaana