ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ರಾಜ್ ಬಿ ಶೆಟ್ಟಿ ಡೈರೆಕ್ಟರ್ – ಸುದ್ದಿ ಕೇಳಿ ಖುಷಿಯಾದ ಫ್ಯಾನ್ಸ್

ಮಲಯಾಳಂ ನಟ ದುಲ್ಕರ್ ಸಲ್ಮಾನ್‌ಗೆ ರಾಜ್ ಬಿ ಶೆಟ್ಟಿ ಡೈರೆಕ್ಟರ್ – ಸುದ್ದಿ ಕೇಳಿ ಖುಷಿಯಾದ ಫ್ಯಾನ್ಸ್

ಸ್ಯಾಂಡಲ್‌ವುಡ್‌ನ ಸೆನ್ಸೇಷನಲ್ ಡೈರೆಕ್ಟರ್ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಚಿತ್ರ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಇದರ ನಡುವೆ ರಾಜ್ ಬಿ ಶೆಟ್ಟಿ ಈಗಾಗಲೇ ಮಲಯಾಳಂ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದೆ. ಇದೀಗ ರಾಜ್ ಬಿ ಶೆಟ್ಟಿ ವಿಚಾರದಲ್ಲಿ ಮತ್ತೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದೆ. ಮಲಯಾಳಂ ಚಿತ್ರರಂಗದ ಖ್ಯಾತ ನಟ ದುಲ್ಕಲ್ ಸಲ್ಮಾನ್‌ಗೆ ರಾಜ್  ಬಿ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ‘ಟೋಬಿ’ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ರಗಡ್ ಲುಕ್..! – ನಟನ ಅವತಾರ ನೋಡಿ ಅಭಿಮಾನಿಗಳಿಗೆ ಅಚ್ಚರಿ..!

ಮಲಯಾಳಂ ನಟ ದುಲ್ಕರ್ ಸಲ್ಮಾನ್ ರೋಮ್ಯಾಂಟಿಕ್ ಹೀರೋ ಆಗಿ ಕೋಟ್ಯಂತರ ಅಭಿಮಾನಿಗಳ ಮನಗೆದ್ದವರು. ದುಲ್ಕರ್ ಸಲ್ಮಾನ್ ಸಿನಿಮಾ ಕೂಡಾ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡುತ್ತಿರುತ್ತದೆ. ಇದೀಗ ಸ್ಯಾಂಡಲ್‌ವುಡ್‌ನ ಡೈರೆಕ್ಟರ್ ಕಮ್ ನಟ ರಾಜ್ ಬಿ ಶೆಟ್ಟಿ ದುಲ್ಕರ್ ಸಲ್ಮಾನ್ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಸಿಕ್ಕಿದೆ. ಈ ಅಚ್ಚರಿಯ ಸುದ್ದಿಯನ್ನು ಹಂಚಿಕೊಂಡಿದ್ದು ಸ್ವತಃ ದುಲ್ಕರ್ ಸಲ್ಮಾನ್ ಅವರೇ. ಅವರದ್ದೇ ನಿರ್ಮಾಣ ಸಂಸ್ಥೆಯಿಂದ ಈ ಚಿತ್ರ ಮೂಡಿ ಬರಲಿದೆ ಎಂದು ದುಲ್ಕರ್ ಸಲ್ಮಾನ್ ಹೇಳಿಕೊಂಡಿದ್ದಾರೆ. ಅಲ್ಲಿಗೆ ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರರಂಗಕ್ಕೆ ನಿರ್ದೇಶಕರಾಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರಾಜ್ ಬಿ ಶೆಟ್ಟಿ ಅವರ ನಿರ್ದೇಶನದಲ್ಲಿ ಕೆಲಸ ಮಾಡುವುದಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ದುಲ್ಕರ್ ಸಲ್ಮಾನ್ ಹೇಳಿದ್ದಾರೆ.

ಸದ್ಯ ರಾಜ್ ಬಿ ಶೆಟ್ಟಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಟೋಬಿ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕು.

suddiyaana