ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ – ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ – ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. .

ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ ಭಾನುವಾರ 3 ಮನೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ. 3 ಮನೆಗಳ ಮೇಲೆ ದಾಳಿ ಮಾಡಿದ ಇಬ್ಬರು ಉಗ್ರರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು  ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 2030ಕ್ಕೆ ಭಾರತದಲ್ಲಿ ವಿಶ್ವದ ಅತಿದೊಡ್ಡ “ಹಸಿರು ರೈಲ್ವೆ”

ಮಾಹಿತಿಯ ಪ್ರಕಾರ, ಇಬ್ಬರು ಭಯೋತ್ಪಾದಕರು ಅಪ್ಪರ್ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಉಗ್ರರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಸೇನಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿವೆ. ಶೀಘ್ರದಲ್ಲೇ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಹೇಳಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ಇತರ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ “ಗಂಭೀರವಾಗಿದೆ”. ಗಂಭೀರವಾಗಿ ಗಾಯಗೊಂಡವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ ಎಂದು ರಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ.

suddiyaana