ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

ದೇಶದ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸುವ ಪ್ರಕ್ರಿಯೆಯಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೂಡ ಇರುತ್ತಾರೆ. ಆದ್ರೆ ಇನ್ಮುಂದೆ ಮುಖ್ಯ ನ್ಯಾಮಮೂರ್ತಿಯವರನ್ನ ಹೊರಗಿಡುವ ಸಂಬಂಧ ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿದೆ.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಮಸೂದೆ 2023 ನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದ್ದಾರೆ. ಚುನಾವಣಾಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಬೇಕು. ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೇನಾದ್ರೂ ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದೇ ಇದ್ದರೆ ಅತಿ ದೊಡ್ಡ ಪಕ್ಷದ ನಾಯಕ  ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಸಂಪುಟ ಸಚಿವರು ಇದರ ಸದಸ್ಯರಾಗಿರುತ್ತಾರೆ. ಪ್ರಧಾನ ಮಂತ್ರಿ ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಸಂಸತ್ ವಿಸರ್ಜನೆ – ಚುನಾವಣೆ ಮುಂದೂಡಿಕೆಯಾದರೆ ಮಿಲಿಟರಿ ಆಡಳಿತದ ಭೀತಿ

ಚುನಾವಣಾ ಆಯುಕ್ತರಾಗುವ ಅಧಿಕಾರಿ ಭಾರತ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಹುದ್ದೆಯನ್ನು ಹೊಂದಿರಬೇಕು ಎಂಬ ಅಂಶ ಮಸೂದೆಯಲ್ಲಿದೆ. ಮಸೂದೆ ಮಂಡನೆ ಮಾಡಿ ಸಿಜೆಐ ಅವರನ್ನು ಸಮಿತಿಯಿಂದ ಹೊರಗಿಡಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

suddiyaana