ಮರ್ಯದಾ ಪುರುಷೋತ್ತಮನನ್ನು ಕಣ್ತುಂಬಿಕೊಳ್ಳಲು 2ನೇ ದಿನವೂ ಸೇರಿದ ಭಕ್ತಸಾಗರ – ರಾಮಮಂದಿರದಲ್ಲಿ ಹೈ ಸೆಕ್ಯೂರಿಟಿ

ಮರ್ಯದಾ ಪುರುಷೋತ್ತಮನನ್ನು ಕಣ್ತುಂಬಿಕೊಳ್ಳಲು 2ನೇ ದಿನವೂ ಸೇರಿದ ಭಕ್ತಸಾಗರ – ರಾಮಮಂದಿರದಲ್ಲಿ ಹೈ ಸೆಕ್ಯೂರಿಟಿ

ಅಯೋಧ್ಯೆ ರಾಮಮಂದಿರದಲ್ಲಿ ಬಾಲ ರಾಮನ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಬಾಲ ರಾಮನ ದರ್ಶನಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಮಂಗಳವಾರ ಸುಮಾರು 5 ಲಕ್ಷ ಜನ ಭೇಟಿ ನೀಡಿದ್ದರು. ಬುಧವಾರ ಕೂಡ ಲಕ್ಷಾಂತರ ಭಕ್ತರು ಬಾಲಕ ರಾಮನ ದರ್ಶನಕ್ಕೆ ಮುಂಜಾನೆಯಿಂದಲೇ ಕಾದು ಕುಳಿತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮ‌ಮಂದಿರ‌ ನಿರ್ಮಾಣ ಬೆನ್ನಲ್ಲೇ ನೂತನ ರಾಮ ಸೇತುಗೆ ಪ್ಲ್ಯಾನ್ – ಭಾರತ – ಶ್ರೀಲಂಕಾ ನಡುವೆ ಶೀಘ್ರ 23 ಕಿ.ಮೀ. ಉದ್ದದ ಸಮುದ್ರ ಸೇತುವೆ!

ಹೌದು, ಮರ್ಯಾದಾ ಪುರುಷೋತ್ತಮನ್ನು ಕಣ್ತುಂಬಿಕೊಳ್ಳಲು ಸಹಸ್ತ್ರಾರು ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ.  ಮೊದಲ ದಿನೇ ಶ್ರೀರಾಮನ ದರ್ಶನ ಮಾಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿತ್ತು. ಇದೇ ವೇಳೆ ಜನಸಂದಣಿ ನಿಯಂತ್ರಿಲಾಗದೆ ಉತ್ತರಪ್ರದೇಶ ಪೊಲೀಸರು ಸುಸ್ತಾಗಿ ಹೋಗಿದ್ದು, ಸದ್ಯಕ್ಕೆ ಅಯೋಧ್ಯೆಯತ್ತ ಬರದಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಭಕ್ತರ ಸಂದಣಿ ನಿಯಂತ್ರಿಸಲು ರಾಮಮಂದಿರಕ್ಕೆಂದೇ ಒಬ್ಬ ಐಎಎಸ್ ದರ್ಜೆಯ ಮ್ಯಾಜಿಸ್ಟ್ರೇಟರನ್ನೂ ನೇಮಿಸಲಾಗಿದೆ. ಮೊದಲ ದಿನ ಮಧ್ಯಾಹ್ನದ ವೇಳೆ ಸುಮಾರು 2.5 ರಿಂದ 3 ಲಕ್ಷ ಜನರು ದರ್ಶನ ಮಾಡಿದ್ದು, ರಾತ್ರಿ ವೇಳೆ ಅಂದಾಜು 5 ಲಕ್ಷ ಜನರು ಮೊದಲ ದಿನ ರಾಮನ ದರ್ಶನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಕೆಲವು ಸಂಚಾರ ಮಾರ್ಗಗಳಲ್ಲಿಬದಲಾವಣೆ ತಂದಿದ್ದಾರೆ. ಲಖನೌನಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಬಾರಾಬಂಕಿಯಿಂದ ಅಯೋಧ್ಯೆ ಕಡೆಗಿನ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಈ ಮಧ್ಯೆ, ”ಮೊದಲ ದಿನವೇ ರಾಮಲಲ್ಲಾನ ದರ್ಶನ ಪಡೆಯಬೇಕು ಎಂಬ ಆತುರಬೇಡ. ಮಂದಿರದ ಆವರಣದಲ್ಲಿಸೆಲ್ಫಿ ಕ್ಲಿಕ್ಕಿಸಿಕೊಂಡು ಸರತಿ ಸಾಲಿಗೆ ಅಡ್ಡಿಪಡಿಸಬೇಡಿ. ಸಾಧ್ಯವಾದಷ್ಟು ದಿನ ಅಯೋಧ್ಯೆ ಭೇಟಿ ಮುಂದೂಡಿ,” ಎಂದು ಉ.ಪ್ರದೇಶ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

Shwetha M