ತಿರುಪತಿ ಪ್ರಸಾದ ವಿವಾದದ ಬೆನ್ನಲ್ಲೇ ಅಯೋಧ್ಯೆಯಲ್ಲಿ ಮಹತ್ವದ ನಿರ್ಧಾರ – ಏಜೆನ್ಸಿಗಳಿಂದ ತಯಾರಾಗುವ ಪ್ರಸಾದಕ್ಕೆ ನಿಷೇಧ ಹೇರಿಕೆ!
ಆಂಧ್ರಪ್ರದೇಶದ ತಿರುಪತಿ ದೇವಾಲಯದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ನಡೆಯುತ್ತಿರುವ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಅನೇಕ ದೇವಸ್ಥಾನ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ. ಇದೀಗ ಅಯೋಧ್ಯೆಯ ರಾಮ ಮಂದಿರವು ಪ್ರಸಾದದ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದೆ. ಹೊರಗಡೆ ಏಜೆನ್ಸಿಗಳಿಂದ ತಯಾರಾಗುವ ಪ್ರಸಾದವನ್ನು ನಿಷೇಧಿಸಿದೆ.
ಇದನ್ನೂ ಓದಿ: ಯುದ್ಧ ನಿಲ್ಲಿಸ್ತಾರಾ ಮೋದಿ?- ಉಕ್ರೇನ್ ಅಧ್ಯಕ್ಷರಿಗೆ ಹೇಳಿದ್ದೇನು?
ಈ ಬಗ್ಗೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಮಾಹಿತಿ ನೀಡಿದ್ದಾರೆ, ದೇಶಾದ್ಯಂತ ಮಾರಾಟವಾಗುತ್ತಿರುವ ತುಪ್ಪದ ಶುದ್ಧತೆಯನ್ನು ಪ್ರಶ್ನಿಸಿದ್ದಾರೆ. ದೇವಾಲಯದ ಅರ್ಚಕರ ಮೇಲ್ವಿಚಾರಣೆಯಲ್ಲಿ ಮಾತ್ರ ಪ್ರಸಾದ ತಯಾರಿಸಬೇಕು ಎಂದು ಹೇಳಿದ್ದಾರೆ. ಎಲ್ಲಾ ಪ್ರಮುಖ ದೇವಾಲಯಗಳು ಹಾಗೂ ಮಠಗಳಲ್ಲಿ ಹೊರಗಡೆ ಯಾವುದೇ ಸಂಸ್ಥೆಯು ಸಿದ್ಧಪಡಿಸಿರುವ ಪ್ರಸಾದದ ಮೇಲೆ ಸಂಪೂರ್ಣ ನಿಷೇಧ ಹೇರಲಾಗುವುದು ಎಂದು ತಿಳಿಸಿದ್ದಾರೆ.
ನೈವೇದ್ಯದಲ್ಲಿ ಮಾಂಸ ಮತ್ತು ಕೊಬ್ಬನ್ನು ಬೆರೆಸಿ ದೇಶದ ಮಠ-ಮಂದಿರಗಳನ್ನು ಅಪವಿತ್ರಗೊಳಿಸುವ ಅಂತಾರಾಷ್ಟ್ರೀಯ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ, ರಾಷ್ಟ್ರವ್ಯಾಪಿ ಮಾರಾಟವಾಗುತ್ತಿರುವ ತೈಲ ಮತ್ತು ತುಪ್ಪದ ಶುದ್ಧತೆಯನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.