ಅಗ್ನಿ ಕ್ಷಿಪಣಿ ಪಿತಾಮಹ ಡಾ. ರಾಮ್ ನಾರಾಯಣ್ ಅಗರ್ವಾಲ್ ಇನ್ನಿಲ್ಲ
ಭಾರತದ ಖ್ಯಾತ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್(83) ನಿಧನರಾಗಿದ್ದಾರೆ. ಅಗರ್ವಾಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಎಂದು ವರದಿಯಾಗಿದೆ.
ಡಿಆರ್ಡಿಓ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಡಾ. ರಾಮ್ ನಾರಾಯಣ್ ಅಗರ್ವಾಲ್ ಅವರು ಅತ್ಯುತ್ತಮ ವೈಮಾನಿಕ ವಿಜ್ಞಾನಿ ಅವರ ನಿದನದಿಂದ ತುಂಬಾ ದುಃಖವಾಗಿದೆ. ಭಾರತದ ದೀರ್ಘ ವ್ಯಾಪ್ತಿಯ ಕ್ಷಿಪಣಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದಿದ್ದಾರೆ.
ಇದನ್ನೂ ಓದಿ: ಒಂದು ಹಾವು.. ಮೂರು ಮುಂಗುಸಿಯ ಬಿಗ್ ಫೈಟ್! – ರಣರೋಚಕ ಕಾದಾಟದಲ್ಲಿ ಗೆದ್ದಿದ್ಯಾರು?
ಅಗರ್ವಾಲ್ ಅವರು ಜಗತ್ತಿನ ಅತ್ಯಂತ ಶಕ್ತಿಶಾಲಿ ಕ್ಷಿಪಣಿಗಳಲ್ಲಿ ಒಂದಾದ ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಎಂದು ಖ್ಯಾತಿ ಪಡೆದಿದ್ದರು. ಅಗರ್ವಾಲ್ ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಅಗರ್ವಾಲ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಅಗ್ನಿ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿದ್ದರು. ಪದ್ಮಭೂಷಣ ಪ್ರಶಸ್ತಿಗೂ ಭಾಜನರಾಗಿದ್ದರು.
ಡಿಆರ್‌ಡಿಒ ತಯಾರಿಸಿದ ಅಗ್ನಿ ಕ್ಷಿಪಣಿಯನ್ನು ಭಾರತದ ಪರಮಾಣು ಸಾಮರ್ಥ್ಯದ ಬೆನ್ನೆಲುಬು ಎಂದು ಪರಿಗಣಿಸಲಾಗಿದೆ. ಇಲ್ಲಿಯವರೆಗೆ, ಅಗ್ನಿ ಕ್ಷಿಪಣಿಯ ಐದು ರೂಪಾಂತರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಕ್ಷಿಪಣಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುವಂತೆ ಮಾಡುವುದು ಇದರ ಉದ್ದೇಶವಾಗಿತ್ತು.