ನವೆಂಬರ್ ಕ್ರಾಂತಿ ಇಲ್ಲ. ಬರೀ ಬ್ರಾಂತಿ ಅಷ್ಟೇ! – 5 ವರ್ಷವೂ ಸಿದ್ದರಾಮಯ್ಯ ಸಿಎಂ ಎಂದ ರಾಮಲಿಂಗಾರೆಡ್ಡಿ

ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳನ್ನು ಕಾಂಗ್ರೆಸ್ ನಾಯಕರೇ ಆಡುತ್ತಿದ್ದಾರೆ. ನವೆಂಬರ್ ಕ್ರಾಂತಿ ಇಲ್ಲ. ಬರೀ ಬ್ರಾಂತಿ ಅಷ್ಟೇ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಇದನ್ನೂ ಓದಿ: ಗಂಟೆಗೆ 50,000 ಟಿಕೆಟ್ ಸೇಲ್ – ಕಾಂತಾರ ಚಾಪ್ಪರ್ 1 ರೆಕಾರ್ಡ್ ಬ್ರೇಕ್
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ 5 ವರ್ಷ ಇರ್ತಾರೆ. ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಅಂದುಕೊಂಡವರು. ಆದರೆ ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಹೇಳಿದ ಮೇಲೆ ಸಿಎಂ ಬದಲಾವಣೆ ಅನ್ನೋ ವಿಷಯವೇ ಇಲ್ಲ ಎಂದರು.
ಸಿಎಂ ಅವರು ನಾನೇ ಇರುತ್ತೇನೆ ಅಂತ ಹೇಳಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ಸಿದ್ದರಾಮಯ್ಯ ಇರುತ್ತಾರೆ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಅನ್ನೋ ಪ್ರಶ್ನೆಯೇ ಕೇಳೋ ಹಾಗೇ ಇಲ್ಲ. ನವೆಂಬರ್ ಕ್ರಾಂತಿ ಇಲ್ಲ. ಬರೀ ಬ್ರಾಂತಿ ಅಷ್ಟೇ. ನವೆಂಬರ್‌ಗೆ ಸಚಿವ ಸಂಪುಟ ಪುನರ್ ರಚನೆ ಆಗಬಹುದು. ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ನಿರ್ಧಾರ ಮಾಡಿ ಯಾವಾಗ ಬೇಕಾದರೂ ಸಂಪುಟ ಪುನರ್ ರಚನೆ ಮಾಡಬಹುದು. ಈಗ ಡಿಕೆ ಶಿವಕುಮಾರ್ ಬೆಂಗಳೂರು ಸಚಿವರು ಆಗಿದ್ದಾರೆ. ಈಗೇನು ಖಾಲಿ ಇಲ್ಲ. ಖಾಲಿ ಇದ್ದರೂ ಕೂಡ ನಾನೇನು ಕೇಳೋಕೆ ಹೋಗಲ್ಲ. ನಾನು ಯಾವತ್ತು ಮಂತ್ರಿ ಆಗಬೇಕು, ಇಂತಹ ಖಾತೆ ಬೇಕು, ಜಿಲ್ಲಾ ಉಸ್ತುವಾರಿ ಬೇಕು ಅಂತ ಕೇಳಿಲ್ಲ. ನನ್ನ ಸರ್ವೀಸ್‌ನಲ್ಲಿ ಕೇಳಿಲ್ಲ. ಈಗಲೂ ಕೇಳಿಲ್ಲ. ಮುಂದೆಯೂ ಕೇಳೊಲ್ಲ ಎಂದು ಸ್ಪಷ್ಟಪಡಿಸಿದರು.

ನೋಡಿರಿ

