ಭಾರತ ಮತ್ತು ಥೈಲ್ಯಾಂಡ್ ಸಂಬಂಧ ಶತಮಾನಗಳಷ್ಟು ಹಳೆಯದ್ದು – ಥೈಲ್ಯಾಂಡ್‌ನಲ್ಲಿ ಪ್ರಧಾನಿ ಮೋದಿ

ಭಾರತ ಮತ್ತು ಥೈಲ್ಯಾಂಡ್ ಸಂಬಂಧ ಶತಮಾನಗಳಷ್ಟು ಹಳೆಯದ್ದು  – ಥೈಲ್ಯಾಂಡ್‌ನಲ್ಲಿ ಪ್ರಧಾನಿ  ಮೋದಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಥೈಲ್ಯಾಂಡ್‌ಗೆ ತೆರಳಿದ್ದು, ಅಲ್ಲಿ ಅವರು ಥಾಯ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದ್ದಾರೆ. 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಎರಡು ದಿನಗಳ ಭೇಟಿಗಾಗಿ ಥೈಲ್ಯಾಂಡ್ ದೇಶಕ್ಕೆ ತೆರಳಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, “ಭಾರತ ಮತ್ತು ಥೈಲ್ಯಾಂಡ್‌ನ ಶತಮಾನಗಳಷ್ಟು ಹಳೆಯ ಸಂಬಂಧಗಳು ನಮ್ಮ ಆಳವಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಬಂಧಗಳ ಮೂಲಕ ಸಂಪರ್ಕ ಹೊಂದಿವೆ. ಬೌದ್ಧ ಧರ್ಮದ ಹರಡುವಿಕೆಯು ನಮ್ಮ ಜನರನ್ನು ಸಂಪರ್ಕಿಸಿದೆ. ಆಯುತಾಯದಿಂದ ನಳಂದದವರೆಗೆ ರಾಮಾಯಣದ   ಕಥೆಗಳು ಥಾಯ್ ಜನರ ಜೀವನದ ಒಂದು ಭಾಗವಾಗಿದೆ” ಎಂದು ಹೇಳಿದರು.

ಭಾರತದ ‘ಆಕ್ಟ್ ಈಸ್ಟ್’ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಕೋನದಲ್ಲಿ ಥೈಲ್ಯಾಂಡ್ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, “ನಾವು ಭಾರತ-ಥೈಲ್ಯಾಂಡ್ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದ್ದೇವೆ” ಎಂದು ಹೇಳಿದರು.

 

Kishor KV

Leave a Reply

Your email address will not be published. Required fields are marked *