ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾದ ತೆಕ್ಕಟ್ಟೆಯ ರಮೇಶ್ ನಾಯಕ್

ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾದ ತೆಕ್ಕಟ್ಟೆಯ ರಮೇಶ್ ನಾಯಕ್

ತೆಂಗು ಕಂಗು ಬೆಳೆದರೆ ಮಾತ್ರ ರೈತರಿಗೆ ಲಾಭ ಎಂಬವರ ನಡುವೆ ವೈವಿದ್ಯಮಯ ಕೃಷಿಯಲ್ಲಿ ತೊಡಗಿಸಿಕೊಂಡು ಈಗ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ತೆಕ್ಕಟ್ಟೆಯ ರೈತರೊಬ್ಬರು. ಪ್ರಗತಿಪರ ರೈತ ಎನಿಸಿಕೊಂಡಿರುವ ತೆಕ್ಕಟ್ಟೆಯ ರಮೇಶ್ ನಾಯಕ್ ಅವರು ವಾರ್ಷಿಕ ಸುಮಾರು ಕೋಟಿ ರೂ. ಅಧಿಕ ವಹಿವಾಟು ಮಾಡುವ ಮೂಲಕ ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:ರಾಜ್ಯ ಸ‌ರ್ಕಾರದಿಂದ ರೈತರಿಗೆ ಗುಡ್‌ ನ್ಯೂಸ್‌ – ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌!

ಉಡುಪಿ ಜಿಲ್ಲೆಯ ತೆಕ್ಕಟ್ಟೆ ರಮೇಶ್ ನಾಯಕ್ ರೈಸ್‌ಮಿಲ್ ಉದ್ಯಮಿಯೂ ಹೌದು.  ಜೊತೆಗೆ ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನುಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರೂಪಾಯಿ ಅಧಿಕ ವಹಿವಾಟು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೊಡಮಾಡುವ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದೇ ಡಿಸೆಂಬರ್ 7ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಮೇಶ್ ನಾಯಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ರಮೇಶ್ ನಾಯಕ್ ಅವರು ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು 13 ಎಕರೆ ಜಮೀನಿನಲ್ಲಿ ಸುಮಾರು 11 ಜಾತಿಯ 1,634 ವಿವಿಧ ತಳಿಯ ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಲ ಕಂಡುಕೊಂಡಿದ್ದಾರೆ. ಈ ಮೂಲಕ ಪ್ರಗತಿಪರ ರೈತ ಎನಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಮಾದರಿ ರೈತ ಅಂತಾನೂ ಕರೆಸಿಕೊಂಡಿದ್ದಾರೆ. ಇಂಗು ಗುಂಡಿಯಿಂದ ತೆಗೆಯಲಾದ ಮಣ್ಣನ್ನು ಉಪಯೋಗಿಸಿ 30 ಸಾವಿರ ಅನಾನಸ್ ಗಿಡಗಳನ್ನು ನಾಟಿ ಮಾಡಿದ್ದಾರೆ. ಇದರ ಮಧ್ಯೆ ಪಪ್ಪಾಯಿ ಗಿಡಗಳನ್ನು ನೆಟ್ಟಿದ್ದಾರೆ. ಈ ನಡುವೆ ಡೆಂಗ್ ಸೂರ್ಯ, ಪ್ರಕಾಶ್ಚಂದ್ರ, ವಿಯೆಟ್ನಾಂ, ಸೂಪರ್ ಅರ್ಲಿ, ಸಿಂಗಾಪುರ, ಅತ್ತಾವರ ಜಾತಿಯ ಸುಮಾರು 285 ಹಲಸು ಹಾಗೂ 500 ಡ್ರ್ಯಾಗನ್ ಫ್ರೂಟ್ ಗಿಡಗಳನ್ನು ನೆಟ್ಟಿದ್ದಾರೆ.

Sulekha