ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್‌ – ಶಂಕಿತ ಉಗ್ರರ ಬಳಿ ಇತ್ತು ಕರ್ನಾಟಕದ ಇಬ್ಬರ ನಕಲಿ ಆಧಾರ್‌ ಕಾರ್ಡ್‌!

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್‌ – ಶಂಕಿತ ಉಗ್ರರ ಬಳಿ ಇತ್ತು ಕರ್ನಾಟಕದ ಇಬ್ಬರ ನಕಲಿ ಆಧಾರ್‌ ಕಾರ್ಡ್‌!

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಟೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈಗಾಗಲೇ ಬಾಂಬರ್‌ ಹಾಗೂ ಮಾಸ್ಟರ್‌ ಮೈಂಡ್‌ ಅನ್ನು ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದು, ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.

ಇದನ್ನೂ ಓದಿ: ಜೈಲರ್‌ 2 ಚಿತ್ರಕ್ಕೆ ಹೊಸ ಹೆಸರು! – ಅತೀ ಹೆಚ್ಚು ಸಂಭಾವನೆಗೆ ಬೇಡಿಕೆ ಇಟ್ಟ ತಲೈವಾ!

ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್‌ ಮತೀನ್‌ ತಾಹ, ಮುಸಾವಿರ್‌ ಹುಸೇನ್‌ನನ್ನು ಎನ್‌ಐಎ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  ಶನಿವಾರ ಬೆಳಗ್ಗೆ 10 ಗಂಟೆಗೆ ಎನ್‌ಐಎ ವಿಶೇಷ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಅಧಿಕಾರಿಗಳು ಹಾಜರುಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಬಂಧಿತ ಶಂಕಿತ ಉಗ್ರರ ಬಳಿ ಕರ್ನಾಟಕದ ಇಬ್ಬರ ನಕಲಿ ಆಧಾರ ಕಾರ್ಡ್​ ಪತ್ತೆಯಾಗಿವೆ. ಆರೋಪಿಗಳ ಬಳಿ ಕಲಬುರಗಿಯ ಓರ್ವ ಯುವಕನ ನಕಲಿ ಆಧಾರ ಕಾರ್ಡ್ ಪತ್ತೆಯಾಗಿದೆ. ಕಲಬುರಗಿಯ ವರ್ದಾನಗರ ನಿವಾಸಿಯಾಗಿರುವ ಅನಮೂಲ ಕುಲಕರ್ಣಿ ಎಂಬ ಯುವಕನ ನಕಲಿ ಆಧಾರ‌ ಕಾರ್ಡ್​ ಉಗ್ರರ ಬಳಿ ಇತ್ತು. ಟೆಕ್ಕಿ ಅನಮೂಲ ಕುಲಕರ್ಣಿ ಸದ್ಯ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಉಗ್ರರಿಗೆ ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್ ಸಿಕ್ಕಿದ್ದಾದರು ಹೇಗೆ? ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್​​ ಅನ್ನು ಉಗ್ರರರು ಹೇಗೆ ಪಡೆದರು? ಹೀಗೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್‌, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ‍್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

Shwetha M