ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಮಾಸ್ಟರ್​ ಮೈಂಡ್ ಅರೆಸ್ಟ್‌

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಮಾಸ್ಟರ್​ ಮೈಂಡ್ ಅರೆಸ್ಟ್‌

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು‌ ತೀವ್ರಗೊಳಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಆರ್‌ಸಿಬಿ ವಿರುದ್ಧ ಮುಂಬೈಗೆ 7 ವಿಕೆಟ್​ಗಳ ಭರ್ಜರಿ ಜಯ – ಸೂರ್ಯನ ವೇಗದ ಆಟಕ್ಕೆ ಎಲ್ಲರೂ ಶಾಕ್​

ಮಾರ್ಚ್ 1 ರಂದು ವೈಟ್‍ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು. ಬಳಿಕ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಲಾಗಿದ್ದು, ಶಂಕಿತ ಉಗ್ರನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.

ಈ ಹಿಂದೆ ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್‍ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿತ್ತು.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

Shwetha M