ಈ ದಿನದಂದು ಸಿಲಿಕಾನ್ ಸಿಟಿಯಲ್ಲಿ ಮಾಂಸ ಮಾರಾಟ ನಿಷೇಧ! – ರೂಲ್ಸ್ ಬ್ರೇಕ್ ಮಾಡಿದ್ರೆ ಕಾನೂನು ಕ್ರಮ!

ನಾನ್‌ವೆಜ್ ಪ್ರಿಯರೇ.. ನಿಮಗೊಂದು ಮಹತ್ವದ ಸುದ್ದಿ. ಈ ದಿನ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ನಗರದಾದ್ಯಂತ ಮಾಂಸ ಮಾರಾಟ ನಿಷೇಧಿಸಿರುವ ಬಗ್ಗೆ ಬೆಂಗಳೂರು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಗ್ರಾಹಕರೇ ಬೀ ಅಲರ್ಟ್! – ಮನೆಯಲ್ಲಿ PNG ಕನೆಕ್ಷನ್ ಇದ್ರೂ ಬಳಸದಿದ್ದರೆ LPG ಪೂರೈಕೆ ಸ್ಥಗಿತ!
ಶ್ರೀರಾಮನವಮಿ ಹಬ್ಬದ ಅಂಗವಾಗಿ ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಜಿಬಿಎ ಆದೇಶದಲ್ಲಿ, ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ. ನಗರ ವ್ಯಾಪ್ತಿಯಲ್ಲಿರುವ ಎಲ್ಲ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಹಬ್ಬದ ದಿನದ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.ನಗರದಲ್ಲಿ ಯಾವುದೇ ರೀತಿಯ ಅಸಭ್ಯತೆ ಅಥವಾ ಅಕ್ರಮ ನಡೆಯದಂತೆ ನಿಗಾ ವಹಿಸಲಾಗುತ್ತಿದೆ. ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸಹಕರಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ

ನೋಡಿರಿ

