ಸಿಕ್ಕಾಪಟ್ಟೆ ಟ್ರೋಲ್ ಗಳಿಂದ ನೊಂದ ರಶ್ಮಿಕಾಗೆ ರಮ್ಯಾ ಹೇಳಿದ್ದೇನು?
ರಶ್ಮಿಕಾಗೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಸಾಥ್

ಸಿಕ್ಕಾಪಟ್ಟೆ ಟ್ರೋಲ್ ಗಳಿಂದ ನೊಂದ ರಶ್ಮಿಕಾಗೆ ರಮ್ಯಾ ಹೇಳಿದ್ದೇನು?ರಶ್ಮಿಕಾಗೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಸಾಥ್

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಸಿಕ್ಕಾಪಟ್ಟೆ ಟ್ರೋಲ್‌ಗೊಳಾಗಿರೋ ನಟಿ. ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವ್ರ ಬಗ್ಗೆ ಟ್ರೋಲ್ ಪೇಜ್, ಗಾಸಿಪ್ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ವಿಚಾರ ಹರಿದಾಡುತ್ತಲೇ ಇದೆ. ತನ್ನ ಬಗ್ಗೆ ಹರಿದಾಡುತ್ತಿರುವ ನೆಗೆಟಿವ್ ಟ್ರೋಲ್ ಬಗ್ಗೆ ಸ್ವತಃ ನಟಿಯೇ ಬೇಸರ ಹೊರಹಾಕಿದ್ದರು. ಈಗ ರಶ್ಮಿಕಾ ಮಂದಣ್ಣ ಪರ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಾಲಿವುಡ್‌ನಲ್ಲಿ ಮುಂದುವರೆದಿದೆ ಕನ್ನಡದ ಕಾಂತಾರ ಅಬ್ಬರ

ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಪರ ಬರೆದುಕೊಂಡಿರುವ ರಮ್ಯಾ, ಟ್ರೋಲಿಂಗ್ ನಿಲ್ಲದ ಸಂಗತಿ. ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು ಬದುಕುವುದಕ್ಕೆ ಬಿಡಿ ಎಂದು ತನ್ನ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ರಶ್ಮಿಕಾ ಪರವಾಗಿ ರಮ್ಯಾ ಮಾತಾಡಿದ್ದಾರೆ. ನಟ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಮಂದಣ್ಣ ಬ್ರೇಕ್ ಅಪ್ ಆದ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ನಟಿ ಬಗ್ಗೆ ನೆಗೆಟಿವ್ ಟ್ರೋಲ್ ಜಾಸ್ತಿಯೇ ಆಗಿತ್ತು. ಇದಾದ ನಂತರ ಪರಭಾಷೆಯಲ್ಲಿ ನಟಿ ಮಿಂಚುತ್ತಿರುವ ವಿಚಾರದಲ್ಲಿಯೂ ಟ್ರೋಲ್, ಗಾಸಿಪ್ ಆಗಾಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇದನ್ನೆಲ್ಲಾ ನೋಡಿದ ನಟಿ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ನನಗೆ ಕೆಲವೊಂದು ವಿಚಾರಗಳು ತೊಂದರೆ ಕೊಟ್ಟಿದೆ. ಇದರ ಬಗ್ಗೆ ನಾನು ಮೊದಲೇ ಮಾತಾಡಬೇಕಿತ್ತು ಎಂದು ತಮ್ಮ ಮನದಾಳದ ಮಾತನ್ನ ಬರವಣಿಗೆ ಮೂಲಕ ಶುರುಮಾಡಿದ್ದಾರೆ. ವೃತ್ತಿಜೀವನ ಆರಂಭದಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್ ಬ್ಯಾಗ್ ರೀತಿ ಆಗಿದ್ದೇನೆ. ನಾನು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರ ಹಾಗಿದೆ. ಎಲ್ಲರೂ ನನ್ನನ್ನು ಪ್ರೀತಿಸಲೇಬೇಕು ಅಂತೇನಿಲ್ಲ. ನನ್ನ ಬಗ್ಗೆ ನಿಮಗೆ ಸಹಮತ ಇಲ್ಲ ಎಂದ ಮಾತ್ರಕ್ಕೆ ನೀವು ನೆಗೆಟಿವಿಟಿ ಹಬ್ಬಿಸಬಹುದು ಅಂತ ಅರ್ಥವಲ್ಲ. ನಾನು ಹೇಳಿಲ್ಲದೇ ಇರುವ ವಿಚಾರಕ್ಕೆ ನನ್ನನ್ನು ಟ್ರೋಲ್​ ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಬೇಸರ ತೋಡಿಕೊಂಡಿದ್ದಾರೆ. ‘ಸಂದರ್ಶನಗಳಲ್ಲಿ ನಾನು ಹೇಳಿದ್ದನ್ನು ನನ್ನ ವಿರುದ್ಧವೇ ತಿರುಗಿಸಲಾಗಿದೆ. ನನಗೆ ಮತ್ತು ನನ್ನ ಸಂಬಂಧಗಳಿಗೆ ಹಾನಿ ಆಗುವಂತಹ ತಪ್ಪು ಕಥೆಗಳನ್ನು ಇಂಟರ್​ನೆಟ್​ನಲ್ಲಿ ಹರಡಿಸಲಾಗಿದೆ. ಒಳ್ಳೆಯ ಟೀಕೆಯನ್ನು ನಾನು ಸ್ವಾಗತಿಸುತ್ತೇನೆ. ಅದರಿಂದ ಬೆಳವಣಿಗೆ ಸಾಧ್ಯ. ಆದರೆ ನೆಗೆಟಿವಿಟಿ ಮತ್ತು ದ್ವೇಷದಿಂದ ಏನು ಸಾಧ್ಯ’ ಎಂದು ರಶ್ಮಿಕಾ ಪ್ರಶ್ನಿಸಿದ್ದಾರೆ. ಇದರಿಂದ ನಾನೂ ಸಾಕಷ್ಟು ನೊಂದುಕೊಂಡಿದ್ದೇನೆ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದರು.

suddiyaana