ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಮೂವರು ಆರೋಪಿಗಳ ಕಾಲಿಗೆ ಗುಂಡೇಟು

ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಮೂವರು ಆರೋಪಿಗಳ ಕಾಲಿಗೆ ಗುಂಡೇಟು

ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ಗುಂಡೇಟು ಹಾರಿಸಿ ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಮಾತ್ರ ಅಧಿಕಾರ! – ಡಿಕೆ ಶಿವಕುಮಾರ್‌ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಗುರೂಜಿ!

ಸೋಮವಾರ, ವಿಶೇಷ ಪೊಲೀಸ್ ತಂಡಗಳು ಕೋಯಮತ್ತೂರಿನ ದೇವಾಲಯವೊಂದರ ಬಳಿ ಆರೋಪಿಗಳಾದ ತವಸಿ, ಕರುಪ್ಪಸ್ವಾಮಿ ಮತ್ತು ಕಾಳೀಶ್ವರನ್ ಅವರನ್ನು ಸುತ್ತುವರೆದಿದ್ದವು. ಪೊಲೀಸರು ತಮ್ಮನ್ನು ಬಂಧಿಸುತ್ತಾರೆಂದು ಅರಿತ ಆರೋಪಿಗಳು, ತಮ್ಮ ಬಳಿ ಇದ್ದ  ಕುಡುಗೋಲುಗಳಿಂದ ಪೊಲೀಸರ ಮೇಲೆ ಹಲ್ಲೆ ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ಹೆಡ್ ಕಾನ್‌ಸ್ಟೇಬಲ್ ಚಂದ್ರಶೇಖರ್ ಅವರ ಎಡಗೈ ಮತ್ತು ಮುಂಗೈಗೆ ಗಾಯವಾಗಿದೆ. ತಕ್ಷಣ ಪೊಲೀಸರು, ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.  ಗಾಯಗೊಂಡ ಮೂವರು ಆರೋಪಿಗಳನ್ನು ಮತ್ತು ಗಾಯಗೊಂಡ ಪೊಲೀಸ್ ಅಧಿಕಾರಿಯನ್ನೂ ಕೊಯಮತ್ತೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸ್ ಮೂಲಗಳ ಪ್ರಕಾರ, ಈ ಆರೋಪಿಗಳು ಶಿವಗಂಗೈ ಜಿಲ್ಲೆಯವರಾಗಿದ್ದು, ಕೋಯಮತ್ತೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಕರುಪ್ಪಸ್ವಾಮಿ ಮತ್ತು ಕಾಳೀಶ್ವರನ್ ಸಂಬಂಧಿಕರಾಗಿದ್ದು, ಈ ಮೂವರ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ. ಆರೋಪಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತರನ್ನು ಅಡ್ಡಗಟ್ಟಿ, ಸ್ನೇಹಿತನ ಮೇಲೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಯನ್ನು ಅಪಹರಿಸಿ ಪರಾರಿಯಾಗಿದ್ದರು. ಬಳಿಕ, ವಿಮಾನ ನಿಲ್ದಾಣದ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ತಮಿಳುನಾಡಿನಲ್ಲಿ ಭಾರೀ ರಾಜಕೀಯ ಆಕ್ರೋಶಕ್ಕೆ ಕಾರಣವಾಗಿದೆ. ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಇ.ಕೆ. ಪಳನಿಸ್ವಾಮಿ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯನ್ನು ಕಡೆಗಣಿಸಲಾಗಿದೆ ಎಂದು ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಆಡಳಿತಾವಧಿಯಲ್ಲಿ ತಮಿಳುನಾಡು ಮಹಿಳೆಯರ ಸುರಕ್ಷತೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿತ್ತು ಎಂದು ಅವರು ಹೇಳಿದರು.

 

Kishor KV