ತನ್ನದೇ ಮ್ಯಾನೇಜರ್ ನಿಂದ ಮೋಸ ಹೋದ ರಶ್ಮಿಕಾ ಮಂದಣ್ಣ – ವ್ಯವಹಾರ ನೋಡಿಕೊಳ್ಳುತ್ತಿದ್ದವನಿಂದ ₹80 ಲಕ್ಷ ದೋಖಾ

ತನ್ನದೇ ಮ್ಯಾನೇಜರ್ ನಿಂದ ಮೋಸ ಹೋದ ರಶ್ಮಿಕಾ ಮಂದಣ್ಣ – ವ್ಯವಹಾರ ನೋಡಿಕೊಳ್ಳುತ್ತಿದ್ದವನಿಂದ ₹80 ಲಕ್ಷ ದೋಖಾ

ಕೈಯಲ್ಲಿ ಸಾಲು ಸಾಲು ಸಿನಿಮಾ. ಜತೆಗೆ ಹತ್ತು ಹಲವು ಜಾಹೀರಾತು. ಸದ್ಯಕ್ಕೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಟಿ ಅಂದ್ರೆ ಅದು ರಶ್ಮಿಕಾ ಮಂದಣ್ಣ. ಸ್ಯಾಂಡಲ್​ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್​ನಲ್ಲೂ ಮಿಂಚುತ್ತಿರುವ ರಶ್ಮಿಕಾಗೆ ಹಣದ ಹೊಳೆಯೇ ಹರಿದು ಬರುತ್ತಿದೆ. ಆದ್ರೀಗ ಇವರ ಹಣದ ವ್ಯವಹಾರ ನೋಡಿಕೊಳ್ಳುತ್ತಿದ್ದ ವ್ಯಕ್ತಿಯಿಂದಲೇ ಮೋಸ ಹೋಗಿದ್ದಾರಂತೆ.

ಇದನ್ನೂ ಓದಿ : ರಾಕಿಂಗ್ ಸ್ಟಾರ್ ಯಶ್ ಮನೆಗೆ ಐಷಾರಾಮಿ ಕಾರು – ದುಬಾರಿ ಕಾರಿನ ಬೆಲೆ ನಾಲ್ಕು ಕೋಟಿ ರೂಪಾಯಿ..!

ರಶ್ಮಿಕಾರ ಕೆಲಸಗಳನ್ನು ನೋಡಿಕೊಳ್ಳಲು ಮ್ಯಾನೇಜರ್ ಒಬ್ಬರನ್ನ ನೇಮಕ ಮಾಡಿಕೊಂಡಿದ್ರು. ಆರಂಭದಿಂದಲೂ ರಶ್ಮಿಕಾ ಜೊತೆಯೇ ಇದ್ದ ಆತ ರಶ್ಮಿಕಾಗೆ 80 ಲಕ್ಷ ರೂಪಾಯಿ ವಂಚಿಸಿದ್ದಾರಂತೆ. ಆದ್ರೆ ಇದನ್ನ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಲು ಬಿಡದ ರಶ್ಮಿಕಾ ಮ್ಯಾನೇಜರ್​ನೇ ಕೆಲಸದಿಂದ ತೆಗೆದು ಹಾಕಿದ್ದಾರೆ ಎನ್ನಲಾಗಿದೆ. ಪುಷ್ಪಾ 2 ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ.

ಮ್ಯಾನೇಜರ್‌ ಬಹು ಸಮಯದಿಂದ ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದರು. ಮ್ಯಾನೇಜರ್‌ 80 ಲಕ್ಷ ರೂ. ವಂಚನೆ ಎಸಗಿದ ಬಗ್ಗೆ ಗೊತ್ತಾದ ಕೂಡಲೇ ನಟಿ ಮ್ಯಾನೇಜರ್‌ ನನ್ನು ವಜಾಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.  ರಶ್ಮಿಕಾ ಮಂದಣ್ಣ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳು ಇವೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸದ್ಯ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈ ವರ್ಷವೇ ಸಿನಿಮಾ ರಿಲೀಸ್ ಆಗುತ್ತದೆಯೇ ಅಥವಾ ವಿಳಂಬ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇಷ್ಟೇ ಅಲ್ಲದೆ, ‘ರೇನ್​ಬೋ’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ವಿಕ್ಕಿ ಕೌಶಲ್ ಹಾಗೂ ಶಾಹಿದ್ ಕಪೂರ್ ಜೊತೆ ತಲಾ ಒಂದು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಕೂಡ ವರದಿ ಆಗಿದೆ. ನಿತಿನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಶೀರ್ಷಿಕೆ ಫೈನಲ್ ಆಗಿಲ್ಲ.

suddiyaana