ರಶ್ಮಿಕಾ ಮಂದಣ್ಣ ಆಯ್ತು ಈಗ ಕತ್ರಿನಾ ಕೈಫ್ ಸರದಿ – ಡೀಪ್‌ಫೇಕ್ ಟೆಕ್ನಾಲಜಿ ಮೂಲಕ ಕೈಪ್ ಅಶ್ಲೀಲವಾಗಿ ಫೋಟೋ ವೈರಲ್

ರಶ್ಮಿಕಾ ಮಂದಣ್ಣ ಆಯ್ತು ಈಗ ಕತ್ರಿನಾ ಕೈಫ್ ಸರದಿ – ಡೀಪ್‌ಫೇಕ್ ಟೆಕ್ನಾಲಜಿ ಮೂಲಕ ಕೈಪ್ ಅಶ್ಲೀಲವಾಗಿ ಫೋಟೋ ವೈರಲ್

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಹಾಟ್ ವಿಡಿಯೋ ನೋಡಿ ಕೆಲವರಂತೂ ರಶ್ಮಿಕಾ ಮಂದಣ್ಣ ಯಾಕೆ ಹೀಗೆ ಹಸಿಬಿಸಿಯಾಗಿ ಕಾಣಿಸಿಕೊಂಡ್ರು ಅಂತಾ ತಲೆಬಿಸಿ ಮಾಡಿಕೊಂಡಿದ್ದರು. ಆದರೆ, ಅದು ಡೀಪ್‌ಫೇಕ್ ವಿಡಿಯೋ ಅನ್ನೋದು ಬಯಲಾಗಿತ್ತು. ಇದು ದೇಶದೆಲ್ಲೆಡೆ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಕೇಂದ್ರ ಸರಕಾರ ಕೂಡ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್ ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್ ಫೇಕ್ ಕಾಟ ಮುಂದುವರೆದಿದೆ.

ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ವಿಡಿಯೋ ಹಲ್‌ಚಲ್!‌ – ದೃಶ್ಯದ ಬಗ್ಗೆ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ

ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗಷ್ಟೇ ವೈರಲ್‌ ಆಗಿತ್ತು. ವೀಡಿಯೋದಲ್ಲಿ ರಶ್ಮಿಕಾ ಅವರ ಎದೆ ಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ಆದರೀಗ ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂಬ ಸತ್ಯ ಬಯಲಾಗಿದೆ.  ಹೀಗಿರುವಾಗಲೇ ಬಾಲಿವುಡ್ ನಟಿ ಕತ್ರಿನಾ ಕೈಫ್  ಫೋಟೋ ಕೂಡ ಡೀಪ್ ಫೇಕ್ ಮಾಡಲಾಗಿದೆ. ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರ ತಿರುಚಿದ ಡೀಪ್‌ಫೇಕ್ ಫೋಟೊವೊಂದು ವೈರಲ್ ಆಗಿದೆ.  ತಮ್ಮ ಮುಂಬರುವ ಟೈಗರ್ 3 ಚಿತ್ರದಲ್ಲಿ ನಟಿ ಕತ್ರಿನಾ ಅವರು ಬಿಳಿ ಟವಲೊಂದನ್ನು ಹಿಡಿದಿರುವ ದೃಶ್ಯದಲ್ಲಿ ಹಾಲಿವುಡ್‌ನ ಸ್ಟಂಟ್ ವುಮನ್‌ವೊಬ್ಬರ ಜೊತೆ ಬಹುತೇಕ ಅರೆಬೆತ್ತಲೆಯಾಗಿ ನಟಿಸಿದ್ದಾರೆ. ಈ ಮೂಲ ಪೋಟೋವನ್ನು ತಿರುಚಿ, ಟವಲ್‌ ಬದಲಿಗೆ ಅವರು ಬಿಳಿ ಬಿಕಿನಿ ಧರಿಸಿರುವಂತೆ ಅಸಭ್ಯವಾಗಿ ರೂಪಿಸಲಾಗಿದೆ. ಈ ಫೋಟೊ ವಿರುದ್ದ ಹಲವರು ಕಿಡಿಕಾರಿದ್ದು, ಕೃತಕ ಬುದ್ಧಿಮತ್ತೆಯು ಭಯಾನಕವಾಗಿದೆ ಹಾಗೂ ಅದನ್ನು ಮಹಿಳೆಯರನ್ನು ಅಶ್ಲೀಲಗೊಳಿಸಲು ಬಳಸುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದಿದ್ದಾರೆ.

ಬ್ಲಾಕ್ ಡ್ರೆಸ್ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್ಫೇಕ್ ತಂತ್ರಜ್ಞಾನ ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.

Sulekha