ಪಡಿತರ ಚೀಟಿ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆಗೆ ಮತ್ತೆ 10 ದಿನ ಕಾಲಾವಕಾಶ!

ಪಡಿತರ ಚೀಟಿ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆಗೆ ಮತ್ತೆ 10 ದಿನ ಕಾಲಾವಕಾಶ!

ಪಡಿತರ ಚೀಟಿ ಪಡಿತರ ಚೀಟಿ ತಿದ್ದುಪಡಿ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ. ಸೆಪ್ಟೆಂಬರ್‌ 1 ರಿಂದ 10 ರವರೆಗೆ ಪಡಿತರ ಚೀಟಿ ತಿದ್ದುಪಡಿ ಹಾಗೂ ಅರ್ಜಿ ಸಲ್ಲಿಕೆಗೆ ಮತ್ತೆ ಕಾಲಾವಕಾಶ ನೀಡಲಾಗಿದೆ.

ಈ ಮೊದಲು ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ, ಸೋಮವಾರ ಸರ್ವರ್ ದೋಷದಿಂದಾಗಿ ಹಲವರು ತೊಂದರೆ ಅನುಭವಿಸಿದ ಕಾರಣ, ಸಾರ್ವಜನಿಕರು ಇನ್ನಷ್ಟು ಕಾಲಾವಕಾಶ ನೀಡುವಂತೆ ಬೇಡಿಕೆಯಿಟ್ಟಿದ್ದರು. ಇದನ್ನು ಪರಿಗಣಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23ರವರೆಗೂ ಕಾಲಾವಕಾಶ ನೀಡಲಾಗಿತ್ತು. ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ಇನ್ನೂ ಬಗೆಹರಿಯದ ತಾಂತ್ರಿಕ ದೋಷ – 14 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡ್‌ ಕುಟುಂಬಗಳಿಗೆ ಪಾವತಿಯಾಗಿಲ್ಲ ಅನ್ನಭಾಗ್ಯದ ಹಣ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಏಪ್ರಿಲ್‌-ಮೇ ತಿಂಗಳಲ್ಲಿ ಹೊಸದಾಗಿ ಎಪಿಎಲ್‌, ಬಿಪಿಎಲ್‌ ಕಾರ್ಡ್‌ ಮಾಡಿಸುವುದು, ಹೆಸರು ತಿದ್ದುಪಡಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಹೊಸ ಸರಕಾರ ಅಧಿಕಾರಕ್ಕೆ ಬಂದರೂ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಳ ಹಿನ್ನೆಲೆಯಲ್ಲಿ ತಾತ್ಕಾಲಿಕ ಸ್ಥಗಿತವನ್ನು ಸುಮಾರು ನಾಲ್ಕೂವರೆ ತಿಂಗಳ ಕಾಲ ಮುಂದುವರಿಸಲಾಗಿತ್ತು.

suddiyaana