ಟೆಸ್ಟ್ ನಲ್ಲಿ ವೇಗವಾಗಿ 450 ವಿಕೆಟ್ – ಅನಿಲ್ ಕುಂಬ್ಳೆ ದಾಖಲೆ ಮುರಿದ ಅಶ್ವಿನ್

ಟೆಸ್ಟ್ ನಲ್ಲಿ ವೇಗವಾಗಿ 450 ವಿಕೆಟ್ – ಅನಿಲ್ ಕುಂಬ್ಳೆ ದಾಖಲೆ ಮುರಿದ ಅಶ್ವಿನ್

ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 450 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ. ತಮ್ಮ 89ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಈ ದಾಖಲೆ ನಿರ್ಮಿಸಿದರು. ಆಸ್ಟ್ರೇಲಿಯ ವಿರುದ್ಧ ನಾಗ್ಪುರದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ನರ್ ಆರ್. ಅಶ್ವಿನ್, ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಅನಿಲ್ ಕುಂಬ್ಳೆಯವರ ಮಹತ್ವದ ದಾಖಲೆಯನ್ನು ಮುರಿದಿದ್ದಾರೆ. ಮಾರ್ಚ್ 2005 ರಲ್ಲಿ ಪಾಕಿಸ್ತಾನ ವಿರುದ್ಧದ ಟೆಸ್ಟ್‌ನಲ್ಲಿ ಅನಿಲ್ ಕುಂಬ್ಳೆ 450 ವಿಕೆಟ್‌ಗಳನ್ನು ಪಡೆದಿದ್ದರು. ಈ ಸಾಧನೆಯನ್ನು ಮಾಡಲು ಕುಂಬ್ಳೆ 93 ಪಂದ್ಯಗಳನ್ನು ಆಡಿದ್ದರು. ಈಗ ಟೀಮ್ ಇಂಡಿಯಾದ ಸ್ಪಿನ್ನರ್ ಆರ್. ಅಶ್ವಿನ್, 450 ಟೆಸ್ಟ್ ವಿಕೆಟ್‌ಗಳನ್ನು ಅತಿ ಕಡಿಮೆ ಪಂದ್ಯಗಳಲ್ಲಿ ಕಬಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವುದರ ಜೊತೆಗೆ, ಈ ರೇಸ್ನಲ್ಲಿ ವಿಶ್ವದ 2ನೇ ಬೌಲರ್ ಆಗಿದ್ದಾರೆ. 450 ಟೆಸ್ಟ್ ವಿಕೆಟ್‌ಗಳನ್ನು ಪಡೆದ ವಿಶ್ವದ ಎರಡನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 450 ವಿಕೆಟ್ ಪಡೆದ ವಿಶ್ವದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಅವರು ಕೇವಲ 80 ಪಂದ್ಯಗಳಲ್ಲಿ 450 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದರು.

suddiyaana