ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ – ಮಿಸ್ ಯೂ ಲೆಜೆಂಡ್
ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಐಪಿಎಲ್ನಲ್ಲಿ ಮುಂದುವರೆಯುವುದಾಗಿ ಇದೇ ವೇಳೆ ಸ್ಪಿನ್ ದಿಗ್ಗಜ ಸ್ಪಷ್ಟಪಡಿಸಿದ್ದಾರೆ.
106 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್, ತಮ್ಮ ಕೆರಿಯರ್ನಲ್ಲಿ 27, 246 ಎಸೆತಗಳನ್ನು ಎಸೆದಿದ್ದಾರೆ. ಈ ಮೂಲಕ 537 ವಿಕೆಟ್ ಕಬಳಿಸಿದ್ದಾರೆ. ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಆಗಿದ್ದಾರೆ ಅಶ್ವಿನ್. 116 ಏಕದಿನ ಪಂದ್ಯಗಳಲ್ಲಿ 6,303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. 65 ಟಿ20 ಪಂದ್ಯಗಳಲ್ಲಿ 72 ವಿಕೆಟ್ ಕಬಳಿಸಿದ್ದಾರೆ. ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ದಾಖಲೆ ಅಶ್ವಿನ್ ಹೆಸರಲ್ಲಿದೆ.38 ವರ್ಷದ ಅಶ್ವಿನ್ ಕೊನೆಯ ಬಾರಿ ಏಕದಿನ ಪಂದ್ಯವಾಡಿದ್ದು 2023 ರಲ್ಲಿ. ಇದಾದ ಬಳಿಕ ಅವರು ಭಾರತ ಏಕದಿನ ತಂಡಕ್ಕೆ ಆಯ್ಕೆಯಾಗಿರಲಿಲ್ಲ.