ಮೂರನೇ ದಿನದಾಟದಲ್ಲಿ ಜಡೇಜಾ ಜಾದು – ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ರವೀಂದ್ರ ಜಡೇಜಾ ದಾಖಲೆ
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ 3ನೇ ದಿನದಾಟದಲ್ಲಿ ಭಾರತದ ಬೌಲರ್‌ಗಳು ಹಿಡಿತ ಸಾಧಿಸಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ನೂತನ ದಾಖಲೆ ಸೃಷ್ಟಿಸಿದ್ದಾರೆ. ಲೆಫ್ಟ್ ಆರ್ಮ್ ಸ್ಪಿನ್ನರ್ ಆಗಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಹೆಗ್ಗಳಿಕೆ ರವೀಂದ್ರ ಜಡೇಜಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಬಿಷಪ್ ಹೆಸರಲ್ಲಿತ್ತು. ಸದ್ಯ ಜಡೇಜಾ 65 ಟೆಸ್ಟ್‌ನಲ್ಲಿ 267 ವಿಕೆಟ್ ಪಡೆಯುವ ಮೂಲಕ ಈ ದಾಖಲೆ ಮುರಿದಿದ್ದಾರೆ.
ಇದನ್ನೂ ಓದಿ: ಕಾಂಗರೂಗಳ ವಿರುದ್ಧ ರನ್ ಗಳಿಸಲು ಟೀಮ್ ಇಂಡಿಯಾ ಹೈರಾಣ – ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿರುವ ಭಾರತ
ರವೀಂದ್ರ ಜಡೇಜಾ ಅವರು ಸ್ಮಿತ್ ಅವರನ್ನು 8 ಬಾರಿ ಔಟ್ ಮಾಡಿ ರವಿಚಂದ್ರನ್ ಅಶ್ವಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ. 51 ಎಸೆತಗಳಲ್ಲಿ 7 ಫೋರ್ ಮತ್ತು ಒಂದು ಸಿಕ್ಸರ್ ಸಿಡಿಸಿ 48 ರನ್ ಬಾರಿಸಿ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಿದ್ದ ಜಡೇಜಾ ಬೌಲಿಂಗ್‌ನಲ್ಲಿ ಕೂಡ ನೆರವಾದರು. ಮೂರನೇ ದಿನ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಅವರನ್ನು ಪೆವಿಲಿಯನ್‌ಗೆ ಅಟ್ಟಿದರು.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ರೋಚಕ ಘಟ್ಟದತ್ತ ತಲುಪುತ್ತಿದೆ. ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್‌ಗೆ ಆಲೌಟ್ ಮಾಡಿ ತನ್ನ ಪ್ರಥಮ ಇನ್ನಿಂಗ್ಸ್ ಆಡಿದ ಭಾರತ ಅಜಿಂಕ್ಯ ರಹಾನೆ ಹಾಗೂ ಶಾರ್ದೂಲ್ ಠಾಕೂರ್ ಆಟದ ನೆರವಿನಿಂದ 296 ರನ್ ಗಳಿಸಿತು. 173 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಕಾಂಗರೂ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಗಳಿಸಿದೆ. ನಾಲ್ಕನೇ ದಿನದಾಟ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಆದಷ್ಟು ಬೇಗ ಆಸೀಸ್ ವಿಕೆಟ್ ಕೀಳಬೇಕಿದೆ.