ಕಿಂಗ್ ಕೊಹ್ಲಿ, ಪಡಿಕ್ಕಲ್ ಸ್ಫೋಟಕ ಅರ್ಧಶತಕ – ತವರಿನಲ್ಲಿ ಹೈದರಾಬಾದ್ ತಂಡಕ್ಕೆ ಸೋಲುಣಿಸಿದ ಆರ್‌ಸಿಬಿ

ಕಿಂಗ್ ಕೊಹ್ಲಿ, ಪಡಿಕ್ಕಲ್ ಸ್ಫೋಟಕ ಅರ್ಧಶತಕ – ತವರಿನಲ್ಲಿ ಹೈದರಾಬಾದ್ ತಂಡಕ್ಕೆ ಸೋಲುಣಿಸಿದ ಆರ್‌ಸಿಬಿ

ತವರಿನಲ್ಲಿ ಆರ್‌ಸಿಬಿ ಶುಭಾರಂಭ ಮಾಡಿದೆ. ಬೆಂಗಳೂರಿನಲ್ಲಿ ಆರ್​ಸಿಬಿ ಅಬ್ಬರಕ್ಕೆ ಸನ್​ರೈಸರ್ಸ್ ಹೈದರಾಬಾದ್ ತಂಡ ಸುಸ್ತಾಗಿ ಹೋಗಿದೆ. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಮೂಲಕ ತನ್ನ ಖಾತೆ ತೆರೆದಿದ್ದು ಕೋಟಿ ಕೋಟಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಯಿತು.

ಇದನ್ನೂ ಓದಿ:CSK ಫ್ಯಾನ್ಸ್ ಗೀಗ ತಲಾ ತಲೆಬಿಸಿ  – RCB ವಿರುದ್ಧ ಆಡಲ್ಲ ಧೋನಿ

ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಸೋಲಿಸುವ ಮೂಲಕ ಆರ್‌ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. 202 ರನ್‌ಗಳ ಗುರಿಯನ್ನು ಕೇವಲ 15.4 ಓವರ್‌ಗಳಲ್ಲಿ ಬೆನ್ನಟ್ಟಿದ ಆರ್​ಸಿಬಿ ಗೆದ್ದು ಬೀಗಿದೆ.ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಆರ್​ಸಿಬಿ ಶನಿವಾರ ರಾತ್ರಿ ಮುಟ್ಟಿದ್ದೆಲ್ಲಾ ಚಿನ್ನವಾಗಿದೆ. ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಅರ್ಧಶತಕ ಸಿಡಿಸಿದರು. ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ಗಮನ ಸೆಳೆದರು. ಟಾಪ್ ಗೇರ್​ನಲ್ಲಿ ಬ್ಯಾಟಿಂಗ್‌ ಮಾಡಿದ ಪಡಿಕ್ಕಲ್ ಬೌಂಡರಿ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಆರ್​​ಸಿಬಿ ಕೇವಲ 4 ಓವರ್​ಗಳಲ್ಲಿ ಅರ್ಧಶತಕದ ಗಡಿ ದಾಟಿತು. ಈ ಹಂತದಲ್ಲಿ ಪಡಿಕ್ಕಲ್ 11 ಎಸೆತಗಳಲ್ಲಿ 34 ರನ್ ಬಾರಿಸಿದ್ದರು. ನಂತರವೂ ಅಬ್ಬರ ಮುಂದುವರೆಸಿದ ಪಡಿಕ್ಕಲ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಬರೆದರು. ಅಂತಿಮವಾಗಿ 9ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ ಪಡಿಕ್ಕಲ್ 26 ಎಸೆತಗಳಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್ ಬಾರಿಸಿ ಔಟಾದರು. ನಂತರ ಕಿಂಗ್ ಕೊಹ್ಲಿ ಬ್ಯಾಟಿಂಗ್ ಅಂತೂ ಅಮೋಘವಾಗಿತ್ತು. ಕಿಂಗ್ ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಕ್ಲಾಸ್ ಆಟ ಪ್ರದರ್ಶಿಸಿ 38 ಎಸೆತಗಳಲ್ಲಿ 5 ಸಿಕ್ಸರ್ 5 ಬೌಂಡರಿ ಸಹಿತ ಅಜೇಯ 61 ರನ್ ಚಚ್ಚಿದರು.

Sulekha