ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ರೈಲು ಸೇವೆ ವಿಸ್ತರಣೆ ಮಾಡಿದ ಬಿಎಂಆರ್‌ಸಿಎಲ್!

ಸಿಲಿಕಾನ್ ಸಿಟಿ ಬೆಂಗಳೂರಿನ ಮಂದಿಗೆ ಮಹತ್ವದ ಸುದ್ದಿಯಿದೆ. ಬೆಂಗಳೂರಿನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಇದನ್ನೂ ಓದಿ: ಮಾಜಿ ಸಿಂಗಂಗೆ ಬಿಗ್‌ಶಾಕ್ – ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರಾ ಅಣ್ಣಾಮಲೈ?
ಏ.2 ರಿಂದ ಬೆಂಗಳೂರಿನಲ್ಲಿ ಈ ಸೀಸನ್‌ನ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಬೆಂಗಳೂರಿನಲ್ಲಿ ಒಟ್ಟು 7 ಮ್ಯಾಚ್‌ಗಳು ನಡೆಯಲಿವೆ. 7 ಪಂದ್ಯಗಳು ನಡೆಯುವ ದಿನ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಮೆಟ್ರೋ ರೈಲು ಸೇವೆಯನ್ನು ರಾತ್ರಿ 12:30ರವರೆಗೂ ವಿಸ್ತರಿಸಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ಚಲ್ಲಘಟ್ಟ, ಮಾದಾವರ, ರೇಷ್ಮೆ ಸಂಸ್ಥೆ ಮತ್ತು ವೈಟ್‌ಫೀಲ್ಡ್ ಮಾರ್ಗಗಳಲ್ಲಿ ಮಧ್ಯ ರಾತ್ರಿ 12:30ರವರೆಗೂ ಮೆಟ್ರೋ ಸಂಚರಿಸಲಿದೆ. ಮೆಜೆಸ್ಟಿಕ್‌ನಿಂದ ಕೊನೆಯ ರೈಲು ನಾಲ್ಕು ಟರ್ಮಿನಲ್‌ಗಳಿಗೂ ಮಧ್ಯರಾತ್ರಿ 1:15ಕ್ಕೆ ಹೊರಡಲಿದೆ. ಏ.8, ಏ.10, ಏ.18, ಏ.24, ಮೇ 3, 13 ಮತ್ತು 17ರಂದು ಬೆಂಗಳೂರಿನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ. ನಾಳೆ (ಏ.2) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಜಿಟಿ ತಂಡದ ನಡುವೆ ಮೊದಲ ಪಂದ್ಯ ನಡೆಯಲಿದೆ.