ತವರಿನಲ್ಲಿ ಆರ್‌ಸಿಬಿಗೆ ಹೀನಾಯ ಸೋಲು – ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಗಳ ಭರ್ಜರಿ ಜಯ

ತವರಿನಲ್ಲಿ ಆರ್‌ಸಿಬಿಗೆ ಹೀನಾಯ ಸೋಲು – ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಗಳ ಭರ್ಜರಿ ಜಯ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವೆ ನಡೆದ ಹೈವೋಲ್ಟೇಜ್‌ ಪಂದ್ಯದಲ್ಲಿ ಆರ್‌ಸಿಬಿ ಹೀನಾಯ ಸೋಲಾಗಿದೆ.  5 ವಿಕೆಟ್‌ಗಳ ಜಯ ಗಳಿಸಿದ ಪಂಜಾಬ್‌ ಕಿಂಗ್ಸ್‌ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದೆ.

ಇದನ್ನೂ ಓದಿ: ರಾವಣಾಸುರನಾಗಿ ತೆರೆಗೆ ಬರಲು ಯಶ್ ರೆಡಿ – ಮೇ ಟು ಅಕ್ಟೋಬರ್ ರಾಕಿಂಗ್‌ ಸ್ಟಾರ್‌ ಫುಲ್‌ ಬ್ಯುಸಿ!

ಮಳೆಯಿಂದಾಗಿ 7:30ಕ್ಕೆ ಆರಂಭವಾಗಿದ್ದ ಪಂದ್ಯ 2 ಗಂಟೆ ತಡವಾಗಿ 9:30ಕ್ಕೆ ಆರಂಭವಾಯಿತು. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಕೊನೆಯಲ್ಲಿ ಟಿಮ್‌ ಡೇವಿಡ್‌ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 95 ರನ್‌ ಹೊಡೆಯಿತು.

ಸುಲಭದ ಸವಾಲನ್ನು ಬೆನ್ನಟ್ಟಿದ ಪಂಜಾಬ್‌ 12.1  ಓವರ್‌ಗಳಲ್ಲಿ 5  ವಿಕೆಟ್‌ ನಷ್ಟಕ್ಕೆ 98 ರನ್‌ ಹೊಡೆದು ಜಯಗಳಿಸಿತು. ಈ ಮೊದಲು ಗುಜರಾತ್‌ ಟೈಟಾನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯವನ್ನು ಸೋತಿತ್ತು. ಈಗ ಮತ್ತೆ ತವರಿನಲ್ಲಿ ರಾಜಸ್ಥಾನದ ವಿರುದ್ಧ ಸೋತಿದೆ.

ಪಂಜಾಬ್‌ ಪರ ನೆಹಾಲ್ ವಧೇರಾ ಔಟಾಗದೇ 33 ರನ್‌ (19 ಎಸೆತ, 3 ಬೌಂಡರಿ, 3 ಸಿಕ್ಸ್‌) ಪ್ರಿಯಾಂಶ್‌ ಆರ್ಯ 16 ರನ್‌, ಪ್ರಭುಸಿಮ್ರಾನ್‌ಸಿಂಗ್‌ 13 ರನ್‌ ಹೊಡೆದು ಜಯವನ್ನು ತಂದುಕೊಟ್ಟರು. ಆರ್‌ಸಿಬಿ ಪರ ಸಾಲ್ಟ್‌ 4 ರನ್‌, ಕೊಹ್ಲಿ 1 ರನ್‌, ನಾಯಕ ಪಾಟೀದರ್‌ 23 ರನ್‌ ಹೊಡೆದು ಔಟಾದರು.

63 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿದ್ದರೂ ಕೊನೆಯಲ್ಲಿ ಡೇವಿಡ್‌ ಔಟಾಗದೇ ಸ್ಫೋಟಕ 50 ರನ್‌ (26 ಎಸೆತ, 5 ಬೌಂಡರಿ, 3 ಸಿಕ್ಸ್‌) ಹೊಡೆದು ತಂಡದ ಮೊತ್ತವನ್ನು 90 ರನ್‌ಗಳ ಗಡಿಯನ್ನು ದಾಟಿಸಿದರು. ಆರ್ಶ್‌ದೀಪ್‌ ಸಿಂಗ್‌, ಜಾನ್‌ಸೆನ್‌ ಚಹಲ್‌, ಹರ್‌ಪ್ರೀತ್‌ ಬಾರ್‌ ತಲಾ 2 ವಿಕೆಟ್‌ ಪಡೆದರು.

Shwetha M