IPL ಮ್ಯಾಚ್ ನೋಡ್ಬೇಕು.. ಟಿಕೆಟ್ ಸಿಕ್ತಿಲ್ಲ! – ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕಿದ ವಿಪಕ್ಷ ನಾಯಕರು!

ಐಪಿಎಲ್ ಆರಂಭಕ್ಕೆ ಕೌಂಟ್‌ಡೌನ್ ಶುರುವಾಗಿದೆ. RCB Vs SRH ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಮ್ಯಾಚ್‌ನ ಟಿಕೆಟ್ ಬಿಡುಗಡೆಯಾಗಿದ್ದು, 15 ನಿಮಿಷದಲ್ಲೇ ಸೋಲ್ಡ್ ಔಟ್ ಆಗಿದೆ. ಇದು RCB ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಈ ಬಗ್ಗೆ ವಿಧಾನಸಭೆಯಲ್ಲೂ ಚರ್ಚೆ ನಡೆದಿದೆ.
ಇದನ್ನೂ ಓದಿ: ಜಯಂತ್‌ನಿಂದ ಜಾನು ಬಚಾವ್.. ಚಿನ್ನುಮರಿಯಿಂದ ಸೈಕೋಗೆ ಗೇಟ್‌ಪಾಸ್! – ವಿಶ್ವನ ಜೊತೆ ಜಾಹ್ನವಿ ಮದುವೆ?
ಮಾ.28ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ RCB ಹಾಗೂ SRH ನಡುವಿನ ಪಂದ್ಯದ ಟಿಕೆಟ್‌ನ ಆರ್‌ಸಿಬಿ ಫ್ರಾಂಚೈಸಿ ಮಂಗಳವಾರ ಮಾರಾಟ ಮಾಡಿತು. ಸಂಜೆ 4 ಗಂಟೆಗೆ ಆರ್‌ಸಿಬಿಯ ಅಧಿಕೃತ ವೆಬ್‌ಸೈಟ್ ಹಾಗೂ ಆ್ಯಪ್‌ನಲ್ಲಿ ಟಿಕೆಟ್‌ಗಳು ಖರೀದಿಗೆ ಲಭ್ಯವಾದವು. 4.10ರ ವೇಳೆಗೆ ಟಿಕೆಟ್ ಖಾಲಿಯಾಗಿತ್ತು. ಇದೀಗ ಶಾಸಕರು ಕೂಡ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಮಗೆ ಐಪಿಎಲ್ ಮ್ಯಾಚ್ ನೋಡಲು ಸರಿಯಾಗಿ ಟಿಕೆಟ್ ಸಿಗುತ್ತಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶಾಸಕರಿಗೆ ಅಗೌರವವಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ. ಕ್ರಿಕೆಟ್‌ನವರಿಗೆ ದುಡ್ಡಿಗೇನು ಕೊರತೆನಾ? ಶಾಸಕರಾದ ನಮಗೆ ಅಲ್ಲಿ ಒಂದು ಪಾಸ್ ಕೊಡಲ್ಲ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ.
ಕ್ರಿಕೆಟ್ ಸ್ಟೇಡಿಯಂ ಕಟ್ಟೋಕೆ ಸರ್ಕಾರದ ಹಣ ಬೇಕು. ಜಾಗ ಕೊಟ್ಟಿರೋದು ಕ್ರಿಕೆಟ್ ಅಭ್ಯಾಸ ಮಾಡೋಕೆ ಹಾಗೂ ಕ್ರಿಕೆಟ್ ಆಡೋಕೆ. ಆದರೆ ಅಲ್ಲಿ ಎಣ್ಣೆ ಹೊಡಿಯೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಇದನ್ನೆಲ್ಲಾ ಟೈಟ್ ಮಾಡಿ, ಆಗ ಬಾಯಿ ಮುಚ್ಚಿಕೊಂಡು ಬರುತ್ತಾರೆ ಎಂದು ಆರ್ ಅಶೋಕ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಅವರ ಬಳಿ ಸಾವಿರಾರು ಕೋಟಿ ದುಡ್ಡಿದೆ. ನಾವು ಒಂದು ಟಿಕೆಟ್‌ಗೆ ಅಂಗಲಾಚಬೇಕು. ನನ್ನ ಹೆಸರಲ್ಲೇ ಟಿಕೆಟ್ ಕಳಿಸಿಕೊಡುತ್ತಾರೆ. ಆ ಟಿಕೆಟ್‌ನಲ್ಲಿ ನನ್ನ ಹೆಂಡತಿ ಕಳಿಸೋಕೆ ಆಗಲ್ಲ, ಮಗನನ್ನೂ ಕಳಿಸೋಕೆ ಆಗಲ್ಲ ಎಂದು ಆರ್ ಅಶೋಕ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಶಾಶಕ ವಿಜಯಾನಂದ ಕಾಶಪ್ಪನವರ್, ಎಂಎಲ್‌ಎಗಳಿಗೆ ಒಂದು ಟಿಕೆಟ್ ಕೊಡ್ತಾರೆ. ಅದು ಸಾಮಾನ್ಯ ಗ್ಯಾಲರಿಯಲ್ಲಿ ಹೋಗಿ ಕುಳಿತುಕೊಳ್ಳಬೇಕು. ಮೊದಲೆಲ್ಲಾ ಎರಡು ಟಿಕೆಟ್ ಕೊಡುತ್ತಿದ್ದರು. ಎಂಎಲ್‌ಎಗಳು ಕೂರಲು ಒಂದು ಅವಕಾಶ ಮಾಡಿಕೊಡಿ. ನಮ್ಮ ಮಕ್ಕಳು, ನಮ್ಮ ಮನೆಯವರು ಹೋಗ್ತಾರೆ. ನಾವು ಅಲ್ಲಿಗೆ ಹೋದರೆ ಮರ್ಯಾದೆಯಿಲ್ಲ. ಶಾಸಕರು, ಸಚಿವರಿಗೆ ಪ್ರತ್ಯೇಕ ಗ್ಯಾಲರಿ ಮಾಡಿಸಿ ಎಂದು ಸ್ಪೀಕರ್ ಬಳಿ ಮನವಿ ಮಾಡಿದರು.
ಇದ್ರ ಬೆನ್ನಲ್ಲೇ ಸ್ಪೀಕರ್ ಯುಟಿ ಖಾದರ್ ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರ ಕೆಎಸ್‌ಸಿಎ ಅವರನ್ನು ಕರೆದು ಮಾತನಾಡಬೇಕು. ಅಲ್ಲಿ ಹೋಗಿ ಶಾಸಕರಿಗೆ ಅಗೌರವಾಗುವುದು ಸರಿಯಲ್ಲ. ಶಾಸಕರ ಕುಟುಂಬಕ್ಕೆ ಕನಿಷ್ಠ 4 ಟಕೆಟ್ ಕೊಡಬೇಕು. ಅಲ್ಲಿ ಶಾಸಕರಿಗೆ ಗೌರವ ಸಿಗುವ ಕೆಲಸವಾಗಬೇಕು ಎಂದು ಸ್ಪೀಕರ್ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದರು. ಈ ಬೆನ್ನ್ಲಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರ ಮನವಿಯನ್ನು ಅವರಿಗೆ ತಿಳಿಸಿ ಸೂಕ್ತ ಕ್ರಮ ವಹಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ನೋಡಿರಿ

