ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ – RCB ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ – RCB ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ

18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು RCB ಚಾಂಪಿಯನ್ ಆಗಿದೆ. ಫ್ಯಾನ್ಸ್‌ ಸಂಭ್ರಮ ಮುಗಿಲು ಮುಟ್ಟಿತ್ತು. ಆದ್ರೀಗ ಸಂಭ್ರಮಾಚರಣೆ ಇರಬೇಕಾದ ಜಾಗದಲ್ಲಿ ಸೂತಕದ ಛಾಯೆ ಅವರಿಸಿದೆ. ಅಭಿಮಾನಿಗಳ ಅತಿರೇಕದ ಅಭಿಮಾನಕ್ಕೆ ದೊಡ್ಡ ಅನಾಹುತವೇ ನಡೆದು ಹೋಗಿದೆ. ಯಾವುದೇ ಭದ್ರತಾ ಪೂರ್ವಸಿದ್ಧತೆ ಇಲ್ಲದೇ ನಡೆದ ಕಾರ್ಯಕ್ರಮ ಇದಾಗಿದ್ದರಿಂದ ಈ ರೀತಿ ದೊಡ್ಡ ದುರಂತವೇ ಸಂಭವಿಸಿದೆ.

ಇದನ್ನೂ ಓದಿ: ಟ್ರೋಫಿ ಗೆದ್ದ RCB ದಾಖಲೆಗಳೆಷ್ಟು? –  CSK, MI, KKR ಬೇಟೆಯೇ ಚರಿತ್ರೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ.  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ  ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, 10ಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಾಲಗಿದ್ದ ನಾಲ್ವರು ಆರ್​ಸಿಬಿ ಅಭಿಮಾನಿಗಳು ಸೇರಿದಂತೆ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ.

Shwetha M

Leave a Reply

Your email address will not be published. Required fields are marked *