RCB ಪಂದ್ಯ ನೋಡೋಕೆ ಬರೋ ಮೆಟ್ರೋ ಪ್ರಯಾಣಿಕರ ಗಮನಕ್ಕೆ – ಭಾನುವಾರ ಮಧ್ಯರಾತ್ರಿ 2 ಗಂಟೆವರೆಗೆ ಸಂಚರಿಸಲಿದೆ ನಮ್ಮ ಮೆಟ್ರೋ

ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ಭಾನುವಾರದಂದು ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ RCB VS ಸಿಎಸ್‌ಕೆ ಮುಖಾಮುಖೀಯಾಗಲಿವೆ. ಹೀಗಾಗಿ ಬೆಂಗಳೂರು ಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಪ್ರಯಾಣಿಕರಿಗೆ ಸುಲಭ ಮತ್ತು ಸುರಕ್ಷಿತ ಪ್ರಯಾಣಕ್ಕೆ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನ ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಿದೆ.
ಎಲ್ಲ ಟರ್ನಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ವೇಳಾಪಟ್ಟಿಯಂತೆ ಹೊರಡಲಿವೆ. ವೈಟ್‌ಫೀಲ್ಡ್(ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ ಮತ್ತು ಚಲ್ಲಘಟ್ಟದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 1ಕ್ಕೆ ಹಾಗೂ ಆರ್.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ.
ಇದನ್ನೂ ಓದಿ: KKR ಸೋಲಿಸಿ ಗೆಲುವಿನ ಖಾತೆ ತೆರೆದ ಸನ್‌ರೈಸರ್ಸ್ ಹೈದರಾಬಾದ್
ಐಪಿಎಲ್ ಪಂದ್ಯಗಳ ಟಿಕೆಟ್‌ನಲ್ಲಿ ನಮ್ಮ ಮೆಟ್ರೊ ಕ್ಯೂಆರ್‌ಕೊಡ್ ಮುದ್ರಿತವಾಗಿರುವ ಕಾರಣ ಟಿಕೆಟ್ ಹೊಂದಿರುವವರು ಉಚಿತ ಪ್ರಯಾಣ ಮಾಡಬಹುದು. ಐಪಿಎಲ್ ಪಂದ್ಯಗಳು ನಡೆಯುವ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್.ಕೆ. ಹೆಗಡೆ ನಗರಕ್ಕೆ, ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್‌ಗೆ ಸಂಚರಿಸಲಿವೆ. ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ಹೊಸಕೋಟೆ, ಬನಶಂಕರಿ ನಿಲ್ದಾಣಗಳಿಗೆ ಬಸ್ ಇರಲಿದೆ.ಪಂದ್ಯದ ದಿನ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳು, ಜಂಕ್ಷನ್‌ಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.

ನೋಡಿರಿ

