ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲಾದ ನಟ

ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಟ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ – ಭಾರತದಿಂದ ಪಾಕ್‌ಗೆ ಹರಿಯೋ ನದಿಗಳ ನೀರು ಸಂಪೂರ್ಣ ಬಂದ್
ಇವತ್ತು ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪೇಂದ್ರ ಓವರ್ ಅಸಿಡಿಟಿಯಿಂದ ಬಳಲುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಅಂತಾ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.