ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಇಂದು ಲೋಕಾರ್ಪಣೆ

ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಇಂದು ಲೋಕಾರ್ಪಣೆ

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳ ಹಲವು ವರ್ಷಗಳ ಕನಸು ಇಂದು ನನಸಾಗುತ್ತಿದೆ. ಅಂಬರೀಶ್ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ 6 ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ನಿರ್ಮಿಸಲಾಗಿದೆ. ಈ ಸ್ಮಾರಕವನ್ನು ವಿಶೇಷ ವಿನ್ಯಾಸದಲ್ಲಿ ಮಾಡಲಾಗಿದ್ದು, ಇಂದು ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಇದನ್ನೂ ಓದಿ:`ನಾಟು ನಾಟು’ ಗೆ  ಆಸ್ಕರ್ ಬರಲು ನಾನೇ ಕಾರಣ! –  ಅಜಯ್ ದೇವಗನ್ ಹೀಗ್ಯಾಕೆ ಹೇಳಿದ್ದು?

ಈ ಹಿಂದೆ ಸಿಎಂ ಬೊಮ್ಮಾಯಿ ಕೇವಲ ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರನ್ನು ಇಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಸಂಜೆ 5 ಗಂಟೆಗೆ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ.

ಸ್ಮಾರಕ ಲೋಕಾರ್ಪಣೆ ಸಮಾರಂಭದಲ್ಲಿ  ಕಂದಾಯ ಸಚಿವ ಆರ್. ಅಶೋಕ್, ತೋಟಗಾರಿಕಾ ಸಚಿವ ಮುನಿರತ್ನ, ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್,  ಪುತ್ರ ಅಭಿಷೇಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಅಂಬರೀಶ್ ಸ್ಮಾರಕವನ್ನು ಡಾ.ರಾಜ್ ಕುಮಾರ್ ಸ್ಮಾರಕದ ಕೂಗಳತೆ ದೂರದಲ್ಲಿಯೇ ನಿರ್ಮಿಸಲಾಗಿದೆ. ಒಂದು ಕಡೆ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸಮಾಧಿ ಇದೆ.  ಇನ್ನು ಕೆಲವೇ ತಿಂಗಳಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕ ನಿರ್ಮಿಸಲು ಸರ್ಕಾರ ಮುಂದಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

suddiyaana