1 ಕೆಜಿ ಚಿಕನ್ ರೇಟ್ 360 ರೂಪಾಯಿ – ಒಂದು ಮೊಟ್ಟೆಗೆ 9 ರೂಪಾಯಿ
ದಾಖಲೆ ಬರೆದ ಚಿಕನ್, ಮೊಟ್ಟೆ ಬೆಲೆ

ಒಂದು ವಾರದಿಂದ ಚಿಕನ್ ಮತ್ತು ಮೊಟ್ಟೆ ರೇಟ್ ಏರುತ್ತಲೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಚಿಕನ್ ಮತ್ತು ಮೊಟ್ಟೆ ದರದಲ್ಲಿ ಭಾರೀ ಏರಿಕೆ ಕಂಡುಬಂದಿದೆ.
ಇದನ್ನೂ ಓದಿ:ಬಾಗಲಕೋಟೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 12 ಮಕ್ಕಳು ಅಸ್ವಸ್ಥ
ಚಿಕನ್ ಪ್ರಿಯರ ಜೇಬು ಈಗಾಗಲೇ ಸುಡುತ್ತಿದೆ. ಇದರ ಮಧ್ಯೆ ಮತ್ತೆ ಚಿಕನ್ ಬೆಲೆ ಏರಿಕೆಯಾಗಿದೆ. ಅದು ಕೂಡಾ ಒಂದು ಕೆಜಿ ಚಿಕನ್‌ಗೆ 360 ರೂಪಾಯಿ ಏರಿಕೆಯಾಗಿದೆ. ಹಾಗೂ ಒಂದು ಮೊಟ್ಟೆ 9 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲಿಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಏರಿಕೆಯಾಗಿದೆ. ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ. ಮಾರುಕಟ್ಟೆಯ ಮಾಹಿತಿ ಪ್ರಕಾರ, Without Skin ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ With Skin ಚಿಕನ್ ಪ್ರತಿ ಕೆಜಿಗೆ 340 ರೂಪಾಯಿಗೆ ಮಾರಾಟವಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ 300 ರೂಪಾಯಿ ಆಸುಪಾಸಿನಲ್ಲಿದ್ದ ಚಿಕನ್ ಬೆಲೆ ಈಗ 350ರಿಂದ 360 ರೂಪಾಯಿವರೆಗೆ ಏರಿಕೆಯಾಗಿದೆ. ಮೊಟ್ಟೆ ದರವೂ ಇದೇ ರೀತಿ ಏರಿಕೆ ಕಂಡಿದೆ.
ಸಗಟು ಮಾರುಕಟ್ಟೆಯಲ್ಲಿ ಒಂದು ಮೊಟ್ಟೆ 8 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 8.30 ರಿಂದ 9 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಮೂರು ದಿನಗಳ ಹಿಂದಷ್ಟೇ 7ರಿಂದ 7.50 ರೂಪಾಯಿ ಇದ್ದ ಮೊಟ್ಟೆ ಬೆಲೆ ಈಗ 9 ರೂಪಾಯಿಗೆ ತಲುಪಿರುವುದು ಗ್ರಾಹಕರಿಗೆ ಹೆಚ್ಚುವರಿ ಹೊರೆ ತಂದಿದೆ. ಈ ಬಾರಿ ಕೋಳಿಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಹಾಗೂ ಬೇರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕೋಳಿ ಪೂರೈಕೆಯಾಗುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿಯೇ ಚಿಕನ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ರೀತಿ ಬೆಲೆಯೇರಿಕೆಯಿಂದ ಹೋಟೆಲ್‌ಗಳಲ್ಲೂ ಮುಂದಿನ ದಿನಗಳಲ್ಲಿ ಚಿಕನ್ ಬಿರಿಯಾನಿ, ಮೊಟ್ಟೆ ಕರಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಯೂ ಹೆಚ್ಚಾಗಿದೆ.

ನೋಡಿರಿ

