HMPV ಸೋಂಕಿತ ಮಗುವಿನ ಆರೋಗ್ಯದಲ್ಲಿ ಚೇತರಿಕೆ – ಇಂದು ಡಿಸ್ಚಾರ್ಜ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚೀನೀ ವೈರಸ್ ಹ್ಯೂಮನ್ ಮೆಟಾನ್ಯೂಮೋ ವೈರಸ್ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದೆ. ಇದೀಗ ಸೋಂಕಿತ 8 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ದೊಡ್ಮನೆಯಲ್ಲಿ ತ್ರಿವಿಕ್ರಮ್- ಮಂಜು ಮಧ್ಯೆ ಫೈಟ್! – ರೂಲ್ಸ್ ಬ್ರೇಕ್ ಮಾಡಿದ್ರಾ?
ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆಯಾಗಿತ್ತು. ಸೋಂಕು ಕಾಣಿಸಿದ 3 ತಿಂಗಳ ಮಗು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.
ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದೆ. ಸೋಮವಾರ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಫತ್ರೆಗೆ ಭೇಟಿ ಮಗುವಿನ ಪೋಷಕರಿಂದ ಮಾಹಿತಿಯನ್ನು ಪಡೆದುಕೊಂಡಿದ್ದರು.
ಸದ್ಯಕ್ಕೆ ಮಗು ಈಗ ಆರೋಗ್ಯವಾಗಿದೆ. ಸೋಮವಾರವೇ ಡಿಸ್ಚಾರ್ಜ್ ಆಗಬೇಕಿತ್ತು. ಆದರೆ ವೈದ್ಯರು ಒಂದು ದಿನ ಇರಲಿ ನಿಗಾದಲ್ಲಿ ಎಂದು ತಿಳಿಸಿದ್ದರು ಎಂದು ಮಗುವಿನ ಪೋಷಕರು ತಿಳಸಿದ್ದರು.