ರಾಷ್ಟ್ರ ರಾಜಧಾನಿಯಲ್ಲಿ ವರುಣನ ಆರ್ಭಟ – ರೆಡ್ ಅಲರ್ಟ್ ಘೋಷಣೆ, 100ಕ್ಕೂ ಹೆಚ್ಚು ವಿಮಾನಗಳು ವಿಳಂಬ

ರಾಷ್ಟ್ರ ರಾಜಧಾನಿಯಲ್ಲಿ ವರುಣನ ಆರ್ಭಟ – ರೆಡ್ ಅಲರ್ಟ್ ಘೋಷಣೆ, 100ಕ್ಕೂ ಹೆಚ್ಚು ವಿಮಾನಗಳು ವಿಳಂಬ

ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈಗಾಗಲೇ ದೇಶದ ಹಲವು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ಭಾರೀ ಮಳೆ ಸುರಿದ ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ‘ಸು ಫ್ರಮ್ ಸೋ’ ಹೊಸ ದಾಖಲೆ – ಮೂರನೇ ವಾರ ಸೋಮೇಶ್ವರದ ಸುಲೋಚನ ಗಳಿಸಿದ್ದೆಷ್ಟು?

ದೆಹಲಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಪರಿಣಾಮ ಪಂಚಕುಯಿಯನ್ ಮಾರ್ಗ್, ಮಿಂಟೋ ರಸ್ತೆ, ಮಥುರಾ ರಸ್ತೆ ಹಾಗೂ ಭಾರತ್ ಮಂಟಪದ ಗೇಟ್ ಸಂಖ್ಯೆ 7 ಜಲಾವೃತಗೊಂಡಿದೆ. ಇನ್ನು ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ದೆಹಲಿಯಲ್ಲಿ ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ.

ಇನ್ನು ಕರ್ನಾಟಕದಾದ್ಯಂತ ಮಳೆ  ಮುಂದುವರೆದಿದೆ. ಇಂದಿನಿಂದ ಐದು ದಿನ ಅಂದರೆ ಆ. 09ರಿಂದ 13ರ ವರೆಗೆ ಗಾಳಿಯೊಂದಿಗೆ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅದೇ ರೀತಿಯಾಗಿ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ.

Shwetha M