ಜೈಲಿನಲ್ಲಿರೋ ದರ್ಶನ್‌ಗೆ ಬಿಗ್ ಶಾಕ್ – ಹೊಸ ಕೇಸ್, D ಬಾಸ್ ಕತೆ ಖತಂ!
ಬೆದರಿಕೆ ಕೇಸ್ ಜೀವ ಪಡೆದಿದ್ದೇಕೆ!
ಸಮಸ್ಯೆ ಬರೋಕೆ ಶುರುವಾದ್ರೆ ಮೇಲಿಂದ ಮೇಲೆ ಬರುತ್ತೆ ಅನ್ನೋದು ದರ್ಶನ್ ಸಾಕ್ಷಿ.. ಬಿಂದಾಸ್ ಆಗಿ ಓಡಾಡಿಕೊಂಡಿದ್ದ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿದ್ದಾರೆ.. ಅಲ್ಲದೇ ಅವರಿಗೆ ಬೆನ್ನು ನೋವಿ ಕೂಡ ಬಿಟ್ಟು ಬಿಡದೆ ಕಾಡುತ್ತಿದೆ. ಈ ನಡುವೆ ಅವರ ಮೇಲೆ ಮತ್ತೊಂದು ಸಂಕಂಷ್ಟಕ್ಕೆ ಸಿಲುಕಿದ್ದಾರೆ. ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ.
ಇದನ್ನೂ ಓದಿ: ಸಿಎಂಗೆ ತಲೆನೋವಾಯ್ತು ಮುಡಾ ಕೇಸ್ – ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ ಹೆಚ್‌ಡಿಕೆ
ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕ ಭರತ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದೀಗ 2022ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‌ಸಿಆರ್ ದಾಖಲಾಗಿದ್ದು,ಈ ಬಗ್ಗೆ ಕೂಡ ತನಿಖೆ ನಡೆಯಲಿದೆ. ಹಾಗಿದ್ರೆ ಏನಿದು ಕೇಸ್ ಅಂತಾ ನೋಡೋದಾದ್ರೆ.
ದಾಸನ ಮೇಲೆ ಮತ್ತೊಂದು ಕೇಸ್
2022ರಲ್ಲಿ ನಿರ್ಮಾಪಕ ಭರತ್ ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಎಂಬ ಸಿನಿಮಾವನ್ನು ಆರಂಭ ಮಾಡಿದ್ದರು. ಈ ಸಿನಿಮಾಗೆ ದರ್ಶನ್ ಜೊತೆ ಗುರುತಿಸಿಕೊಂಡಿದ್ದ ಧ್ರುವನ್ ಹೀರೋ ಆಗಿ ಆಯ್ಕೆ ಆಗಿದ್ದರು. ಆದರೆ, ಸಿನಿಮಾ ಹಣಕಾಸಿನ ಸಮಸ್ಯೆಯಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು ಬಳಿಕ ನಟ ಧೃವನ್, ದರ್ಶನ್ ಬಳಿ ಹೋಗಿ ಅವರ ಕೈಯಿಂದ ಭರತ್‌ಗೆ ಕರೆ ಮಾಡಿಸಿದ್ದರು. ಆರಂಭದಲ್ಲಿ ದರ್ಶನ್ ‘ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ’ ಎಂದು ಮನವಿ ಮಾಡಿದ್ದರು. ಬಳಿಕ ‘ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ಇಲ್ಲದಂತೆ ಮಾಡಿಬಿಡುತ್ತೇನೆ’ ಎಂದೆಲ್ಲ ಬೆದರಿಕೆ ಹಾಕಿ ಕೆಲವು ಅವಾಚ್ಯ ಶಬ್ದಗಳನ್ನು ಸಹ ಬಳಸಿದ್ದರು. ಬಳಿಕ ಭರತ್ ಅವರು ತಮಗೆ ಕರೆ ಮಾಡಿ ದರ್ಶನ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್ ರೆಕಾರ್ಡ್ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು ದರ್ಶನ್, ಮ್ಯಾನೇಜರ್ ನಾಗರಾಜ್ ಹಾಗೂ ಧ್ರುವನ್ ವಿರುದ್ಧ ದೂರನ್ನು ದಾಖಲಿಸಿದ್ದರು. ಆ ವೇಳೆ ಪೊಲೀಸರು ದೂರನ್ನಷ್ಟೇ ದಾಖಲಿಸಿಕೊಂಡು ಸುಮ್ಮನಾಗಿದ್ದರು ಎನ್ನಲಾಗಿದೆ. ಆದ್ರೀಗ ಅಕ್ಟೋಬರ್ 17ರಂದು ಕೆಂಗೇರಿ ಪೊಲೀಸರು ಎನ್ಸಿಆರ್ ದಾಖಲಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ನಿರ್ಮಾಪಕರಿಗೆ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ದರ್ಶನ್ಗೆ ಯಾವ ರೀತಿಯ ಸಂಕಷ್ಟ ಎದುರಾಗಬಹುದು? ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.ಆದರೆ, ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿರುವ ದರ್ಶನ್ಗೆ ಅಲ್ಲಿ ಪ್ರಾಣ ಬೆದರಿಕೆ ಪ್ರಕರಣ ಸಮಸ್ಯೆ ಆಗುತ್ತಾ? ಅನ್ನೋ ಅನುಮಾನ ಶುರುವಾಗಿದೆ. ದರ್ಶನ್ ಕೊಲೆ ಹಾಗೂ ಬೆದರಿಕೆ ಎರಡು ಪ್ರಕರಣಗಳನ್ನ ಎದುರಿಸಬೇಕಾಗಿದೆ.