ಮೈಸೂರಿನಲ್ಲಿ ಪಾಗಲ್ ಪ್ರೇಮಿಯ ಹುಚ್ಚಾಟ – ಪೆಟ್ರೋಲ್ ಸುರಿದುಕೊಂಡು ಯುವತಿಯನ್ನ ತಬ್ಬಿಕೊಂಡ ಪಾಪಿ!

ಮೈಸೂರಿನಲ್ಲಿ ಪಾಗಲ್  ಪ್ರೇಮಿಯ ಹುಚ್ಚಾಟ – ಪೆಟ್ರೋಲ್ ಸುರಿದುಕೊಂಡು ಯುವತಿಯನ್ನ ತಬ್ಬಿಕೊಂಡ ಪಾಪಿ!

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿಯೊಬ್ಬ ತನ್ನ ಮೇಲೆ ಪೆಟ್ರೋಲ್‌ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ  ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (27) ಈ ಕೃತ್ಯ ಎಸಗಿದ್ದು, ಈತನಿಗೆ ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದರೆ, ಈತನಿಂದ ತಪ್ಪಿಸಿಕೊಂಡ ಯುವತಿಗೂ ಶೇ. 20ರಷ್ಟು ಸುಟ್ಟ ಗಾಯಗಳಾಗಿವೆ

ಆರೋಪಿ ಯುವಕನನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ನಿವಾಸಿ ಚಂದನ್‌ (27) ಎಂದು ಗುರುತಿಸಲಾಗಿದೆ. ಪಿಯುಸಿ ತನಕ ಓದಿದ್ದ ಚಂದನ್‌ ಊರಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಈ ಯುವಕ ಅದೇ ಗ್ರಾಮದ ಯುವತಿಯನ್ನು 3 ವರ್ಷದಿಂದ ಪ್ರೀತಿಸುತ್ತಿದ್ದ. ಈ ಕುರಿತಂತೆ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಆದರೆ ಯುವತಿ ಒಪ್ಪಿರಲಿಲ್ಲ. ಇದೇ ವಿಷಯಕ್ಕೆ ಯುವತಿ ಮನೆಯವರು ಚಂದನ್‌ಗೆ ಎಚ್ಚರಿಕೆ ಸಹ ನೀಡಿದ್ದರು. ಕೆಲ ದಿನಗಳಿಂದ ಸುಮ್ಮನಿದ್ದ ಚಂದನ ಒಂದು ವಾರದಿಂದ ಮತ್ತೆ ಯುವತಿಗೆ ಪೀಡಿಸತೊಡಗಿದ್ದ ಎನ್ನಲಾಗಿದೆ.

ಇದನ್ನೂ ಓದಿ : ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಗರ್ಜನೆ! – ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ 2ನೇ ಚಿನ್ನ! 

ಯುವತಿ ವಿದ್ಯಾಭ್ಯಾಸಕ್ಕಾಗಿ ವಿಜಯನಗರದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗುತ್ತಿದ್ದಾಗ ಚಂದನ್ ಆಕೆಯನ್ನು ಅಡ್ಡಗಟ್ಟಿದ್ದ ಎಂದು ತಿಳಿದುಬಂದಿದೆ. ಈ ಭಯಾನಕ ಘಟನೆಯು ವಿಡಿಯೋದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ನೀಡಿದ ದೂರನ್ನು ಆಧರಿಸಿ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Kishor KV

Leave a Reply

Your email address will not be published. Required fields are marked *