ಸಾಹಿತ್ಯ ಸಮ್ಮೇಳನಕ್ಕೆ ಬರುವ ವಾಹನಗಳ ನಿಲುಗಡೆಗೆ ನೀಲಿನಕ್ಷೆ ಬಿಡುಗಡೆ – ಜಿಲ್ಲಾ ಸಂಚಾರಿ ಪೊಲೀಸರ ವಿನೂತನ ಪ್ರಯೋಗ

ಸಾಹಿತ್ಯ ಸಮ್ಮೇಳನಕ್ಕೆ ಬರುವ ವಾಹನಗಳ ನಿಲುಗಡೆಗೆ ನೀಲಿನಕ್ಷೆ ಬಿಡುಗಡೆ – ಜಿಲ್ಲಾ ಸಂಚಾರಿ ಪೊಲೀಸರ ವಿನೂತನ ಪ್ರಯೋಗ

ಹಾವೇರಿ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7 ಮತ್ತು 8ರಂದು ಹಾವೇರಿಯಲ್ಲಿ ನಡೆಯಲಿದೆ. ಸಾಮರಸ್ಯದ ಭಾವ ಕನ್ನಡದ ಜೀವ ಎಂಬ ಧ್ಯೇಯದೊಂದಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಕ್ಕೆ ಬರುವ ವಾಹನಗಳ ನಿಲುಗಡೆಗಾಗಿ ಜಿಲ್ಲಾ ಸಂಚಾರಿ ಪೋಲಿಸ್ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ವಾಹನ ನಿಲುಗಡೆ ಮತ್ತು ಸಂಚಾರ ನಿಯಂತ್ರಣಕ್ಕೆ ಕ್ಯು ಆರ್ ಕೋಡ್ ಜೊತೆಗೆ ಸಂಚಾರದ ನೀಲಿನಕ್ಷೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಮೂರು ತಿಂಗಳಿಂದ ಬೃಂದಾವನದ ಬಳಿ ಆಡಿದ್ದೇ ಆಟ – ಕೊನೆಗೂ ಸೆರೆ ಸಿಕ್ಕ ಚಿರತೆ

ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗಾಗಿ ಸುಲಲಿತ ಸಂಚಾರ ವ್ಯವಸ್ಥೆಗಾಗಿ ಜಿಲ್ಲಾ ಸಂಚಾರ ಪೋಲಿಸರು ಕ್ಯು ಆರ್ ಕೋಡ್ ಜೊತೆಗೆ ಸಂಚಾರದ ನೀಲಿನಕ್ಷೆ ಬಿಡುಗಡೆ ಮಾಡಿದ್ದು, ಸಂಚಾರ ಮಾರ್ಗಸೂಚಿಯನ್ನು ಗೂಗಲ್ ಮ್ಯಾಪ್‌ನಲ್ಲಿ ಅತಿ ಸರಳವಾಗಿ ತಿಳಿಯಬಹುದಾಗಿದೆ. ಇದರಿಂದ ಜನರು ಟ್ರಾಫಿಕ್ ಜಾಮ್ ಸಮಸ್ಯೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. ಇನ್ನು ಪಾರ್ಕಿಂಗ್ ವ್ಯವಸ್ಥೆಗೂ ಕೂಡಾ ಸ್ಥಳಗಳನ್ನು ನಿಗದಿ ಮಾಡಲಾಗಿದೆ. ಹುಬ್ಬಳ್ಳಿ ಮಾರ್ಗದಿಂದ ಬರುವ ವಿವಿಐಪಿಗಳ ಕಾರ್ ಗಳಿಗೆ ಹುಬ್ಬಳ್ಳಿ ಬೈಪಾಸ್‌ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕೆ.ಎಲ್.ಇ ಶಾಲೆಯ ಆವರಣದಲ್ಲಿ ಗಣ್ಯರಿಗಾಗಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಸಮ್ಮೇಳನದ ಸ್ಥಳದ ಸುತ್ತಲು ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಸಂಚಾರ ಹಾಗೂ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಹುಬ್ಬಳ್ಳಿ ಮಾರ್ಗದಿಂದ ಬರುವ ವಾಹನಗಳನ್ನು ಹಾನಗಲ್ ಬೈಪಾಸ್‌ನಿಂದ ಹಾವೇರಿ ನಗರಕ್ಕೆ ಬರಲು ಪರ್ಯಾಯ ಮಾರ್ಗ ಸೂಚಿಸಲಾಗಿದೆ. ದಾವಣಗೆರೆಯಿಂದ ಬರುವ ವಾಹನ ಹಾಗೂ ಬಸ್‌ಗಳಿಗೆ ಹಾನಗಲ್ ಬೈ ಪಾಸಿಂದ ತೆರಳಲು ಮಾರ್ಗ ಸೂಚಿಸಲಾಗಿದೆ. ಇವೆಲ್ಲವೂ ಮೊಬೈಲ್‌ನಲ್ಲಿ ಗೂಗಲ್ ಮ್ಯಾಪ್‌ನಲ್ಲಿ ಲಭ್ಯವಾಗುವಂತೆ ಹಾವೇರಿ ಸಂಚಾರಿ ಪೋಲಿಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

suddiyaana