ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ – ನಗರ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ಬಿಡುಗಡೆ

ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ – ನಗರ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ಬಿಡುಗಡೆ

ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬಕ್ಕೆ ಸಿದ್ಧತೆ ಜೋರಾಗಿದೆ. ರಾಜಧಾನಿಯಲ್ಲಿ ಗಣೇಶೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನಗರದ ಪ್ರತಿ ಏರಿಯಾದಲ್ಲಿ ಗಣೇಶನನ್ನು ಕೂರಿಸಿ ಬೆಂಗಳೂರಿನ ಜನ ಸಂಭ್ರಮಿಸುತ್ತಾರೆ. ಹೀಗಾಗಿ ಗೌರಿ ಗಣೇಶ ಹಬ್ಬಕ್ಕೆ ನಗರ ಪೊಲೀಸ್ ಇಲಾಖೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗಣೇಶ ಚತುರ್ಥಿ ಹಿನ್ನೆಲೆ ಬಸ್ ಪ್ರಯಾಣಕ್ಕೆ ಹೆಚ್ಚಿದ ಬೇಡಿಕೆ -ಖಾಸಗಿ ಬಸ್ ಮಾತ್ರವಲ್ಲ, ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವೂ ಏರಿಕೆ!

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯವಾಗಿ ಪಡೆಯಲೇಬೇಕು ಎಂದು ಪೊಲೀಸ್ ಇಲಾಖೆ ಹೇಳಿದೆ. ಗಣೇಶನನ್ನು ಕೂರಿಸಲು ಕಾನೂನು ಬಾಹಿರಬಾಗಿ ಹಣ ಸಂಗ್ರಹ ಮಾಡುವ ಹಾಗಿಲ್ಲ ಎಂದು ಗೈಡ್ ಲೈನ್‌ನಲ್ಲಿ ಸೂಚಿಸಲಾಗಿದೆ. ಗಣೇಶನನ್ನು ಕೂರಿಸುವ ವಿಚಾರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸುತ್ತಿದೆ. ಹೀಗಾಗಿ ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ಬಿಡುಗಡೆ

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ

ಗಣಪತಿಯನ್ನು ಕೂರಿಸಲು ಕಾನೂನು ಬಾಹಿರಬಾಗಿ ಹಣ ಸಂಗ್ರಹ ಮಾಡುವಹಾಗಿಲ್ಲ

ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್ ಗೆ ವಿಶೇಷ ಅನುಮತಿ ಪಡೆಯಬೇಕು

ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಹಾಗಿಲ್ಲ

ಮೆರವಣಿಗೆ ವೇಳೆ ಏನೇ ಅಹಿಕತರ ಘಟನೆ ನಡೆದರೆ ಸಂಘಟಕರೇ ಅದಕ್ಕೆ ಹೊಣೆ

ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಸಿಬೇಕು

ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಾಗ್ರಿಗಳನ್ನು ಇಡಬಾರದು

ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ NOC ಕಡ್ಡಾಯ

ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್

ಯಾವುದೇ ಕಾರಣಕ್ಕೂ DJ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ

ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ

ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು

Sulekha